Home News ಬೆದರಿಕೆ ಕರೆ: ಸಿಎಂ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ

ಬೆದರಿಕೆ ಕರೆ: ಸಿಎಂ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ

ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆದರಿಕೆ ಕರೆಗಳು ಬರುತ್ತೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಪ್ರಚಾರಕ್ಕಾಗಿ ಸಿಎಂ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಸುಲಿಗೆಯಂಥ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ. ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯನ್ನು ಖಂಡಿಸಲಾಗುವುದು. ಇಂಥ ಘಟನೆಗಳನ್ನು ತಡೆಯುವ ಶಕ್ತಿ ಸಿಎಂ ಹಾಗೂ ಗೃಹ ಸಚಿವರಿಗೆ ಇಲ್ಲ. ಮುಂದಿನ ದಿನಗಳಲ್ಲಿ ಜನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ.
ಪಾಕಿಸ್ತಾನದ ಮೇಲೆ ಭಾರತದ ಯುದ್ಧ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವ ಸಮಯದಲ್ಲಿ ಏನು ಮಾಡಬೇಕು ಎನ್ನುವುದು ಗೊತ್ತಿದೆ. ದೇಶದಲ್ಲಿ ಜಾತಿಗಣತಿ ಆಗಬೇಕು ಎಂಬುದು ಹಲವು ದಿನಗಳ ಅಪೇಕ್ಷೆ ಆಗಿತ್ತು. ಕೇಂದ್ರ ಸರ್ಕಾರ ಈಗ ಕ್ರಮಕೈಗೊಂಡಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.

Exit mobile version