ಮುಂಬೈ ವಿಮಾನ ನಿಲ್ದಾಣದಲ್ಲಿ ಐಸಿಸ್ ಸ್ಲೀಪರ್ ಸೆಲ್​ನ ಇಬ್ಬರು ಉಗ್ರರ ಬಂಧನ

NIA

ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಐಸಿಸ್ ಸ್ಲೀಪರ್ ಸೆಲ್​ನ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ತಿಳಿಸಿದೆ.
ಮಹಾರಾಷ್ಟ್ರದ ಪುಣೆಯಲ್ಲಿ 2023 ರಲ್ಲಿ ನಡೆದ ಸುಧಾರಿತ ಸ್ಫೋಟಕ ಸಾಧನಗಳ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರಿಬ್ಬರು ಆರೋಪಿಗಳಾಗಿದ್ದರು. ಡಯಾಪರ್‌ವಾಲಾ ಎಂದೂ ಕರೆಯಲ್ಪಡುವ ಅಬ್ದುಲ್ಲಾ ಫೈಯಾಜ್ ಶೇಖ್ ಮತ್ತು ತಲ್ಲಾ ಖಾನ್ ಎಂದು ಗುರುತಿಸಲಾದ ಶಂಕಿತರು, ಇಬ್ಬರು ಆರೋಪಿಗಳು ಎರಡು ವರ್ಷಗಳಿಗೂ ಹೆಚ್ಚು ಕಾಲ ತಲೆಮರೆಸಿಕೊಂಡಿದ್ದರು. ಮುಂಬೈನ ಎನ್​ಐಎ ವಿಶೇಷ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿತ್ತು. ಅಬ್ದುಲ್ಲಾ ಫೈಯಾಜ್ ಶೇಖ್ ಅಲಿಯಾಸ್ ಡಯಾಪರ್‌ವಾಲಾ ಮತ್ತು ತಲ್ಹಾ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಎನ್‌ಐಎ ಈ ಹಿಂದೆ ಘೋಷಿಸಿತ್ತು. ಇಂಡೋನೇಷ್ಯಾದ ಜಕಾರ್ತಾದಿಂದ ಭಾರತಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ವಲಸೆ ಬ್ಯೂರೋ ಅವರನ್ನು ತಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.