ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಕಳೆದ 28 ದಿನಗಳ ಕಾಲ ಭಕ್ತರು ಕಾಣಿಕೆ ರೂಪದಲ್ಲಿ ಹಾಕಿರುವ ಹುಂಡಿ ಹಣವನ್ನು ಮಂಗಳವಾರ ಎಣಿಕೆ ಮಾಡಲಾಗಿದ್ದು, ₹ 3.79 ಕೋಟಿ ಹಣ ಸಂಗ್ರಹವಾಗಿದೆ. ಅಲ್ಲದೇ 74 ಗ್ರಾಂ ಚಿನ್ನ, 1,830 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
3,66,88,595 ರೂ. ಮೌಲ್ಯದ ನೋಟುಗಳು, 12,21,860 ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು 3,79,10,455 ರೂ. ಗಳ ಹಣ ಸಂಗ್ರಹವಾಗಿದೆ ಎಂದು ಶ್ರೀಮಠದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.