ವಿದ್ಯುತ್ ಸ್ಪರ್ಶ: ಕಾರ್ಮಿಕ ಸಾವು

ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ಆರ್‌ಟಿಪಿಎಸ್ ಘಟಕದಲ್ಲಿ ವಿದ್ಯುತ್ ಸ್ಪರ್ಶವಾದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಮೃತ ಕಾರ್ಮಿಕ ತಿಮ್ಮಾರೆಡ್ಡಿ(28) ಎಂದು ಗುರುತಿಸಲಾಗಿದೆ. ರಂಗಪ್ಪ, ಹನುಮೇಶ ಮತ್ತು ವೀರೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆರ್‌ಟಿಪಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ವಾಟರ್ ಕ್ಲಾರಿಫೈರ್ ಸ್ವಚ್ಛತೆ ಕಾರ್ಯದಲ್ಲಿ ತೊಡಗಿದ್ದಾಗ ವಿದ್ಯುತ್ ಹರಿದು ಪರಿಣಾಮ ಕಾರ್ಮಿಕ ಸಾವನ್ನಪ್ಪಿದ್ದಾನೆ. ಶಕ್ತಿನಗರದ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.