ಹಂಪಿ ಪ್ರವಾಸಕ್ಕೆ ಬಂದು ಆತ್ಮಹತ್ಯೆಗೆ ಯತ್ನ: ಓರ್ವ ಸಾವು

ವಿಜಯನಗರ: ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬದ ನಾಲ್ವರು ಸದಸ್ಯರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಓರ್ವ ಮೃತಪಟ್ಟಿರುವ ಘಟನೆ ಹಂಪಿಯ ಸರಸ್ವತಿ ದೇಗುಲ ಬಳಿ ನಡೆದಿದೆ.
ಚಂದ್ರಯ್ಯ (43) ಮೃತಪಟ್ಟಿದ್ದು, ಸೌಮ್ಯ (35) ಭವಾನಿ (12) ಶಿವಕುಮಾರ್ (8) ಮೂವರು ಪಾರಾಗಿದ್ದಾರೆ ಎನ್ನಲಾಗಿದೆ. ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ವಿಷ ಸೇವಿಸಿದ್ದರು. ಇದಕ್ಕೆ ನಿಖರ ಕಾರಣ ತಿಳಿಯಲು ಪ್ರಯತ್ನಿಸಲಾಗುತ್ತಿದೆ, ಚಂದ್ರಯ್ಯ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.