Home News ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ

ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ

ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ ನಡೆಸಿದ ಘಟನೆ ನಡೆದಿದೆ.
ಜಿಲ್ಲೆಯ ಜಯಪುರ ಹೋಬಳಿ ಹಾರೋಹಳ್ಳಿ ಬಳಿ ಮುಸುಕುದಾರಿಗಳು ಹಾಡು ಹಗಲೇ ಕಾರನ್ನು ಅಡ್ಡಗಟ್ಟಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ, ಕೇರಳ ಉದ್ಯಮಿ ಸೂಫಿ ಎಂಬುವವರ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಕಾರನ್ನೇ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ದರೋಡೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ, ಘಟನಾ ಸ್ಥಳಕ್ಕೆ ಡಿವೈಎಸ್ ಪಿ ರಘು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Exit mobile version