ಸೋಲಿನ ಬೆನ್ನಲ್ಲೇ ಏಕದಿನ ಕ್ರಿಕೆಟ್‌ಗೆ ಸ್ಟೀವ್ ಸ್ಮಿತ್ ವಿದಾಯ

ನವದೆಹಲಿ: ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದರು,
35 ವರ್ಷದ ಸ್ಮಿತ್ ಆಸ್ಟ್ರೇಲಿಯಾ ಪರ 169 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 153 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5727 ರನ್ ಕಲೆಹಾಕಿದ್ದಾರೆ.

ಇನ್ನು ನಿವೃತ್ತಿ ಕುರಿತಂತೆ ಮಾತನಾಡಿರುವ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ ನನ್ನ ಆದ್ಯತೆಯಾಗಿ ಉಳಿದಿದೆ. ನಾನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ವೆಸ್ಟ್ ಇಂಡೀಸ್ ಮತ್ತು ನಂತರ ಹೋಮ್ ಗೌಂಡ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ಸರಣಿಗಾಗಿ ಎದುರು ನೋಡುತ್ತಿದ್ದೇನೆ. ಟೆಸ್ಟ್ ಕ್ರಿಕೆಟ್‌ಗೆ ಇನ್ನೂ ಸಾಕಷ್ಟು ಕೊಡುಗೆ ನೀಡಬೇಕೆಂದು ನಾನು ಭಾವಿಸುತ್ತೇನೆ, ಇದೊಂದು ಅದ್ಭುತ ಪ್ರಯಾಣವಾಗಿತ್ತು. ನಾನು ಪ್ರತಿ ನಿಮಿಷವನ್ನು ಆನಂದಿಸಿದ್ದೇನೆ. ಅಲ್ಲಿ ಹಲವು ಅದ್ಭುತ ಕ್ಷಣಗಳು ಮತ್ತು ಅದ್ಭುತ ನೆನಪುಗಳಿವೆ. ಎರಡು ವಿಶ್ವಕಪ್ ಗೆಲ್ಲುವುದು ಒಂದು ದೊಡ್ಡ ಸಾಧನೆ. ಈ ಪಯಣದಲ್ಲಿ ತಂಡದ ಅನೇಕ ಉತ್ತಮ ಸದಸ್ಯರು ಜೊತೆಗಿದ್ದರು. 2027 ರ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸಲು ಈಗ ಉತ್ತಮ ಅವಕಾಶ. ಆದ್ದರಿಂದ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಹೀಗಾಗಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ

ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ