Home ಆರೋಗ್ಯ ಹಾವೇರಿ ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 24 ಜನ ಹೃದಯಾಘಾತಕ್ಕೆ ಬಲಿ

ಹಾವೇರಿ ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 24 ಜನ ಹೃದಯಾಘಾತಕ್ಕೆ ಬಲಿ

ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ 24 ಜನರು ಹೃದಯಾಘಾತದಿಂದ ಮೃತಪಟ್ಟಿರುವುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಈ ಬೆಳವಣಿಗೆ ಜನರಿಗೆ ಆತಂಕ ಮೂಡಿಸಿದೆ.
ಕಳೆದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳಲ್ಲಿ 40 ವಯಸ್ಸಿನ ಒಳಗಿನ ಒಬ್ಬರು, 40-60 ವಯಸ್ಸಿನ 10 ಜನರು ಹಾಗೂ 60ವರ್ಷ ಮೇಲ್ಪಟ್ಟ 13 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು, ಬ್ಯಾಡಗಿ ತಾಲೂಕು ಆಸ್ಪತ್ರೆಯಲ್ಲಿ 2, ಹಾನಗಲ್ಲ 3 , ಹಿರೇಕೆರೂರು 5, ಸವಣೂರು 5, ಶಿಗ್ಗಾವಿ 2, ಅಕ್ಕಿಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1, ಮಾಸೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 1, ರಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ 3 ಜನರು ಮೃತಪಟ್ಟಿದ್ದಾರೆ.
ಕಳೆದ 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 78 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಲ್ಲಿ 40 ವಯಸ್ಸು ಒಳಗಿನ ಮೂವರು, 40-60 ವರ್ಷದ 28 ಜನರು, 60 ವರ್ಷ ಮೇಲ್ಪಟ್ಟ 47 ಜನರು ಮೃತಪಟ್ಟಿದ್ದಾರೆ ಎಂದು ಡಿಎಚ್‌ಒ ಡಾ.ಜಯಾನಂದ ಅವರು ಮಾಹಿತಿ ನೀಡಿದ್ದಾರೆ.

Exit mobile version