ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

Advertisement

ಕಳಸ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಇಂದು ಕುಟುಂಬ ಸಮೇತ ಹೊರನಾಡಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದರು.
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸಚಿವರಿಗೆ ಸ್ವಾಗತ ನೀಡಿ ಬರಮಾಡಿಕೊಂಡರು. ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಶ್ರೀ ಕ್ಷೇತ್ರದಲ್ಲಿ ಮೊಮ್ಮಗಳಿಗೆ ಅನ್ನಪ್ರಾಶನ ಕೈಂಕರ್ಯ ನಡೆಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಣಿಕ್ ಮಸಣಗಿ, ರಾಜೇಂದ್ರ ಹೆಬ್ಬಾರ್, ಮೊಹಮದ್ ರಫಿಕ್, ವೀರೇಂದ್ರ, ಸುಧಾಕರ್, ಸುಕುರು, ಶಂಸುದ್ದೀನ್, ಹೊರನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ಮಧು ಪ್ರಸಾದ್ ಉಪಸ್ಥಿತರಿದ್ದರು
ಕಾರ್ಯಕರ್ತರ ಭೇಟಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಜಯಿಸಲು ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.
ಅವರು ಇಂದು ಕಳಸದಲ್ಲಿರುವ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಶಾಸಕರ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾಗಿ ಚರ್ಚೆ ನಡೆಸಿ ಮಾತನಾಡಿದ ಸಚಿವರು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಿದ್ದು ತುಂಬಾ ಖುಷಿ ಆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗುವಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ಕರೆ ನೀಡಿದರು. ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಾರ್ಯಕರ್ತರು ಸನ್ಮಾನಿಸಿದರು. ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೇಯಾಣಿಕ, ಸ್ಥಳೀಯ ಮುಖಂಡರಾದ ವೀರೇಂದ್ರ, ಶಂಸುದ್ದೀನ್ ಉಪಸ್ಥಿತರಿದ್ದರು.