ಬೆಂಗಳೂರು: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ,
ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್, ಮೈಸೂರು ಮೂಲದ ಓ ಶಾಂತಿ ಗೋಲ್ಡ್ ಕುಂಕುಮ್ ಸೇರಿದಂತೆ ಹಲವು ಉತ್ಪನ್ನಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಜಾಲತಾಣದಲ್ಲಿ ಪಟ್ಟಿ ಬಿಡುಗಡೆ ಮಾಡಿ ಪೋಸ್ಟ್ ಮಾಡಿದ್ದಾರೆ ಕರ್ನಾಟಕದ ಔಷಧ ಪರೀಕ್ಷಾ ಪ್ರಯೋಗಾಲಯವು ಕೆಲ ಔಷಧಗಳು/ಸೌಂದರ್ಯವರ್ಧಕಗಳನ್ನು ‘ಪ್ರಮಾಣೀಕೃತ ಗುಣಮಟ್ಟದಲ್ಲಿಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಎಲ್ಲಾ ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಈ ಉತ್ಪನ್ನಗಳನ್ನು ಸಂಗ್ರಹಿಸುವುದು/ಮಾರಾಟ ಮಾಡುವುದು/ಬಳಸುವುದನ್ನು ತಕ್ಷಣವೇ ನಿಲ್ಲಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆಸ್ಪತ್ರೆ, ಔಷಧ ಮಳಿಗೆಗಳಲ್ಲಿ ಯಾವುದೇ ಸಂಗ್ರಹ ಇದ್ದರೆ, ನಿಮ್ಮ ಸ್ಥಳೀಯ ಔಷಧ ನಿರೀಕ್ಷಕರು ಅಥವಾ ಸಹಾಯಕ ಔಷಧ ನಿಯಂತ್ರಕರಿಗೆ ತಕ್ಷಣವೇ ತಿಳಿಸಿ. ನಿಮ್ಮ ಸುರಕ್ಷತೆ ನಮ್ಮ ಆದ್ಯತೆ. ದಯವಿಟ್ಟು ಈ ಕೆಳಗೆ ಪಟ್ಟಿ ಮಾಡಲಾದ ಬ್ಯಾಚ್‌ನ ಔಷಧಗಳು/ ಸೌಂದರ್ಯವರ್ಧಕಗಳನ್ನು ಬಳಸಬೇಡಿ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.