ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿಯೂ ಹೆಚ್ಚಳವಾಗಿದೆ.
ಪ್ರತಿ ಸಿಲಿಂಡರ್‌ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಕಳೆದ ಮೂರು ತಿಂಗಳಲ್ಲಿಯೇ ಇದು ಎರಡನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಕಳೆದ ಮಾರ್ಚ್ 7ರಂದು ಪ್ರತಿ ಸಿಲಿಂಡರ್‌ಗೆ 60 ರೂ. ಹೆಚ್ಚಳ ಮಾಡಲಾಗಿತ್ತು.
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ತೈಲ ಮತ್ತು ಅನಿಲ ಪೂರೈಕೆಯಲ್ಲಿ ತೊಂದರೆಯುಂಟಾಗಿದ್ದು ಬೆಲೆ ಹೆಚ್ಚಳಕ್ಕೆ ಮುಖ್ಯ ಕಾರಣವಾಗಿದೆ.





















