ಖ್ಯಾತ ಗಾಯಕಿ ವಾಣಿ ಜಯರಾಂ ಇನ್ನಿಲ್ಲ

0
7
Vani Jayaram

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಚೆನ್ನೈನ ಅವರ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಗೀತೆಗಳನ್ನು ಹಾಡಿದ್ದಾರೆ.
ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿರುವ ಇವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

Previous articleಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗವಾಗಬೇಕು: ಸಿಎಂ
Next articleಕಾಂಗ್ರೆಸ್ ತನ್ನ ಶಾಸಕರನ್ನು ಭದ್ರಮಾಡಿಕೊಳ್ಳಲಿ: ಬೊಮ್ಮಾಯಿ