SK Home Ad
Home ನಮ್ಮ ಜಿಲ್ಲೆ ಯೋಗ, ನೈಸರ್ಗಿಕ ಚಿಕಿತ್ಸೆಗೆ ಜಾಗತಿಕ ಮನ್ನಣೆ: ರಾಜ್ಯಪಾಲರ ಪ್ರಶಂಸೆ

ಯೋಗ, ನೈಸರ್ಗಿಕ ಚಿಕಿತ್ಸೆಗೆ ಜಾಗತಿಕ ಮನ್ನಣೆ: ರಾಜ್ಯಪಾಲರ ಪ್ರಶಂಸೆ

0
80

‘ವಿಕಸಿತ ಭಾರತ-2047’ ಕನಸಿನಲ್ಲಿ ಆರೋಗ್ಯ ಕ್ಷೇತ್ರದ ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನಕ್ಕೆ ಯುವ ವೈದ್ಯರು ಸೇತುವೆಯಾಗಲಿ – ವೈದ್ಯರು ಸಂಶೋಧಕರಾಗಿಯೂ ಬೆಳೆಯಬೇಕು : ರಾಜ್ಯಪಾಲ

ದಾವಣಗೆರೆ : ಭಾರತ ಸರ್ಕಾರ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಸ್ಥಾಪಿಸಲಾಗುತ್ತಿರುವ ‘WHO ಗ್ಲೋಬಲ್ ಸೆಂಟರ್’ ಜಾಗತಿಕ ಜ್ಞಾನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದ್ದು, ಭಾರತೀಯ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳಿಗೆ ವಿಶ್ವ ಮಟ್ಟದಲ್ಲಿ ಮತ್ತಷ್ಟು ಮಾನ್ಯತೆ ತಂದುಕೊಡಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ದಾವಣಗೆರೆ ಸಮೀಪದ ದೊಡ್ಡಬಾತಿಯ ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಯೋಗ ಹಾಗೂ ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದ ವೈದ್ಯಕೀಯ ಪರಂಪರೆಯು ಜಗತ್ತಿನ ಅತ್ಯಂತ ಪ್ರಾಚೀನ ಹಾಗೂ ಸಮೃದ್ಧ ಪರಂಪರೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  ಭಾರತೀಯ ವಾಯುಪಡೆಯ AN-32 ವಿಮಾನ ಪತನ

‘ವಿಕಸಿತ ಭಾರತ-2047’ ಗುರಿಯಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ : ಭಾರತ ಇಂದು ‘ವಿಕಸಿತ ಭಾರತ-2047’ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದು, ಈ ರಾಷ್ಟ್ರೀಯ ಪಯಣದಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆರೋಗ್ಯವಂತ ನಾಗರಿಕರೇ ಬಲಿಷ್ಠ ರಾಷ್ಟ್ರ ನಿರ್ಮಾಣದ ಅಡಿಪಾಯವಾಗಿದ್ದು, ವೈದ್ಯಕೀಯ ಕ್ಷೇತ್ರಕ್ಕೆ ಪದವಿ ಪಡೆದು ಹೊರಬರುತ್ತಿರುವ ಯುವಕರು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಆಯುರ್ವೇದ ಜೀವನ ಪದ್ಧತಿ : ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ. ಅದು ಆರೋಗ್ಯಕರ ಜೀವನ ನಡೆಸಲು ಮಾರ್ಗದರ್ಶನ ನೀಡುವ ಸಮಗ್ರ ಜೀವನ ಪದ್ಧತಿಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

ಇದನ್ನೂ ಓದಿ:  ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಶುಲ್ಕ ವಿರೋಧಿಸಿ ಜೂನ್ 17ರಿಂದ ಕಾಂಗ್ರೆಸ್ ರಾಷ್ಟ್ರವ್ಯಾಪಿ ಅಭಿಯಾನ

ಇಂದಿನ ವೇಗದ ಜೀವನಶೈಲಿ, ಒತ್ತಡ, ಮಾನಸಿಕ ಸಮಸ್ಯೆಗಳು ಮತ್ತು ಪರಿಸರ ಸವಾಲುಗಳ ನಡುವೆ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸೆಗಳ ಪ್ರಾಮುಖ್ಯತೆ ಮತ್ತಷ್ಟು ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

AI ಮತ್ತು Digital ತಂತ್ರಜ್ಞಾನ ಬಳಕೆ : ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಯುವ ವೈದ್ಯರು ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನದ ನಡುವೆ ಬಲಿಷ್ಠ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ:  33 ವರ್ಷಗಳ ಬಳಿಕ ಸ್ಲೋವಾಕಿಯಾಕ್ಕೆ ಭಾರತೀಯ ಪ್ರಧಾನಿಯ ಭೇಟಿ

“ನೀವು ಕೇವಲ ವೈದ್ಯರಾಗಿ ಉಳಿಯದೇ, ಸಂಶೋಧಕರು, ನವೋದ್ಯಮಿಗಳು ಹಾಗೂ ಸಮಾಜದ ಮಾರ್ಗದರ್ಶಕರಾಗಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳಿಗೆ ಆದ್ಯತೆ ನೀಡಬೇಕು” ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಆಯುಷ್ ಸಚಿವಾಲಯದ ಕಾರ್ಯಗಳಿಗೆ ಮೆಚ್ಚುಗೆ : ಭಾರತ ಸರ್ಕಾರದ ಆಯುಷ್ ಸಚಿವಾಲಯವು ಆಯುರ್ವೇದ, ಯೋಗ, ನೈಸರ್ಗಿಕ ಚಿಕಿತ್ಸೆ, ಯುನಾನಿ ಮತ್ತು ಹೋಮಿಯೋಪಥಿ ಸೇರಿದಂತೆ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಇದರ ಪರಿಣಾಮವಾಗಿ ಭಾರತೀಯ ಜ್ಞಾನ ಪರಂಪರೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆಯುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

ಇದನ್ನೂ ಓದಿ:  ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದಾಳಿ: 8 JCBಗಳು ವಶಕ್ಕೆ

ಯೋಗ ಆತ್ಮಶಿಸ್ತು ಮತ್ತು ಮಾನಸಿಕ ಶಾಂತಿಯ ಮಾರ್ಗ : ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ; ಅದು ಆತ್ಮಶಿಸ್ತು, ಮಾನಸಿಕ ಸಮತೋಲನ ಮತ್ತು ಶಾಂತಿಯ ಮಾರ್ಗವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್.ವಿ. ಹಲಸೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ. ಶ್ರೀನಿವಾಸ್ ಬನ್ನಿಗೋಳ, ತಪೋವನ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿ.ಎಂ. ಶಶಿಕುಮಾರ್, ಡಾ. ಕೆ.ಆರ್. ಅಶ್ವಿನಿ ಹಾಗೂ ಡಾ. ಸುಮನಾ ಭಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.