SK Home Ad
Home ಸುದ್ದಿ ರಾಜ್ಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಸಂಪೂರ್ಣ ಪಟ್ಟಿ

0
206

ಕರ್ನಾಟಕ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದು, 13 ಸಚಿವರಿಗೆ ವಿವಿಧ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ. ಡಾ.ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ನೇತೃತ್ವದ ರಾಜ್ಯ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಆದೇಶದ ಪ್ರಕಾರ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಇದನ್ನೂ ಓದಿ: 3 ರಾಜ್ಯಗಳು ಒಟ್ಟಾಗಿ ನೀರಾವರಿ ಸಮಸ್ಯೆ ಬಗೆಹರಿಸೋಣ: ಡಿಕೆ

ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಹಾಗೂ ಮಂಡ್ಯ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಇನ್ನು ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ: ಮುನಿರಾಬಾದ್‌: ಕನ್ನಡದಲ್ಲೇ ಭಾಷಣ – ರೈತರ ಮನಗೆದ್ದ CM ನಾಯ್ಡು

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಇದನ್ನೂ ಓದಿ: ಮುನಿರಾಬಾದ್: ರೈತರ ಹಿತಕ್ಕೆ 3 ರಾಜ್ಯಗಳ ಒಗ್ಗಟ್ಟು – ಸಿಎಂ ರೆಡ್ಡಿ

ರಾಜ್ಯ ಸರ್ಕಾರದ ಈ ನಿರ್ಧಾರವು ಜಿಲ್ಲಾಮಟ್ಟದ ಆಡಳಿತ ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆಗೆ ನೆರವಾಗಲಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಲ್ಲಿ ಸಹಕಾರಿಯಾಗಲಿದೆ.