SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಷಡ್ಯಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಷಡ್ಯಂತ್ರ

0
68

ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಕುರಿತು ಆಡಿಯೋ ವೈರಲ್ ಆದ ಬೆನ್ನಲ್ಲೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿಜಯೇಂದ್ರ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ದೂರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆಲವರು ದುರುದ್ದೇಶಪೂರ್ವಕವಾಗಿ ಷಡ್ಯಂತ್ರ ನಡೆಸುತ್ತಿದ್ದಾರೆ. ವಿಜಯೇಂದ್ರ ಅವರಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದ್ದು, ಈ ಷಡ್ಯಂತ್ರದ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರಿಗೂ ಮಾಹಿತಿ ಇದೆ ಎಂದರು.

ವಿಜಯೇಂದ್ರ ಅವರ ಪಾತ್ರ ಅಥವಾ ಪಾಲು ಯಾವುದೇ ವಿವಾದದಲ್ಲಿ ಇಲ್ಲ. ವಿಜಯೇಂದ್ರ ವಿರುದ್ಧ ಷಡ್ಯಂತ್ರ ರೂಪಿಸುವವರಿಗೆ ಸೂಕ್ತ ಸಮಯದಲ್ಲಿ ರಾಷ್ಟ್ರೀಯ ನಾಯಕರು ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿಗೆ ಅನಿವಾರ್ಯರಲ್ಲ, ವಿಜಯೇಂದ್ರ ಬೇಡ ಎಂದು ಯಾರಿಗಾದರೂ ಅನಿಸಿದರೆ ಅದನ್ನು ಗುಟ್ಟಾಗಿ ಹೇಳದೇ ಬಹಿರಂಗವಾಗಿ ಹೇಳುವ ತಾಕತ್ತು ಇದ್ದರೆ ಮುಂದೆ ಬಂದು ಹೇಳಬೇಕು ಎಂದು ಸವಾಲು ಹಾಕಿದರು.