SK Home Ad
Home ನಮ್ಮ ಜಿಲ್ಲೆ ಚಾಮರಾಜನಗರ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರು ಸಾವು, 42 ಜನರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಇಬ್ಬರು ಸಾವು, 42 ಜನರಿಗೆ ಗಾಯ

0
6

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶ್ರೀಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, 42 ಜನ ಗಾಯಗೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಸಮೀಪದ ಕೆಶಿಫ್ ರಸ್ತೆಯಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಮಹೇಶ್, ಕೊಳ್ಳೇಗಾಲ ಭೀಮನಗರದ ಪುಟ್ಟನಂಜಮ್ಮ ಮೃತಪಟ್ಟವರು. ಉಳಿದಂತೆ ಶಿವಪ್ಪ, ಶಾಂತಮ್ಮ, ರಾಜಮಣಿ, ಚನ್ನಯ್ಯ, ಮಣಿ, ರಾಜಮ್ಮ ಸೇರಿದಂತೆ ಸುಮಾರು 21 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ೨೧ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆಯುವಾಗ ಬಸ್‌ನಲ್ಲಿ ಸುಮಾರು 67 ಜನ ಪ್ರಯಾಣಿಕರಿದ್ದರು. ಕೂಡಲೇ ಗ್ರಾಮಾಂತರ ಮತ್ತು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.