ನವದೆಹಲಿ: ಮುಂಬರುವ ಏಷ್ಯನ್ ಕ್ರೀಡಾಕೂಟಕ್ಕೆ 15 ಸದಸ್ಯರ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಲೀಗ್‌ನಲ್ಲಿಯೇ ಭಾರತ ತಂಡ ಹೊರಬಿದ್ದರೂ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿಯೇ ತಂಡವನ್ನು ಪ್ರಕಟಿಸಲಾಗಿದೆ.
ತಂಡಕ್ಕೆ ಸ್ಮೃತಿ ಮಂದಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ. ವಿಶ್ವಕಪ್ ತಂಡದಲ್ಲಿದ್ದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದ್ದು, ಕೇವಲ ಒಂದು ಬದಲಾವಣೆಯನ್ನು ಮಾತ್ರ ಮಾಡಲಾಗಿದೆ.
ವಿಶ್ವಕಪ್ ತಂಡದಲ್ಲಿದ್ದ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಯಾಸ್ತಿಕಾ ಭಾಟಿಯಾ ಅವರನ್ನ ಈ ಬಾರಿ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಜಿ. ಕಮಲಿನಿ ಅವರಿಗೆ ಅವಕಾಶ ನೀಡಲಾಗಿದೆ.
ಸೆಪ್ಟೆಂಬರ್ 19ರಿಂದ ಅಕ್ಟೋಬರ್ 4ರವರೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ಏಷ್ಯನ್ ಕ್ರೀಡಾಕೂಟ ನಡೆಯಲಿದ್ದು, 2023ರಲ್ಲಿ ಚೀನಾದ ಹ್ಯಾಂಗ್‌ಝನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ತಂಡ ಚಿನ್ನದ ಪದಕ ಗೆದ್ದುಕೊಂಡಿತ್ತು.
ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ಶ್ರೀ ಚರಣಿ, ರೇಣುಕಾ ಠಾಕೂರ್, ಶ್ರೇಯಾಂಕ ಪಾಟೀಲ್, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ, ರಾಧಾ ಯಾದವ್, ನಂದನಿ ಶರ್ಮಾ.























