SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಅಂಬೇಡ್ಕರ್ ನಾಮಫಲಕ ಅಪವಿತ್ರಗೊಳಿಸಿದ ಆರೋಪಿ ಬಂಧನ

ಅಂಬೇಡ್ಕರ್ ನಾಮಫಲಕ ಅಪವಿತ್ರಗೊಳಿಸಿದ ಆರೋಪಿ ಬಂಧನ

0
61

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ನಾಮಫಲಕಕ್ಕೆ ಸಗಣಿ ಎರಚಿ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜೂನ್ 28ರ ರಾತ್ರಿ ವೇಳೆ ಕಿಡಿಗೇಡಿಗಳು ಸಮಾಜದಲ್ಲಿ ದ್ವೇಷಭಾವನೆ ಉಂಟು ಮಾಡುವ ಹಾಗೂ ಗ್ರಾಮದಲ್ಲಿ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದ ಅಂಬೇಡ್ಕರ್ ಅವರ ನಾಮಫಲಕಕ್ಕೆ ಸಗಣಿ ಎರಚಿದ್ದರು. ಈ ಕುರಿತು ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಯಾಗಿರುವ ಚಿಕ್ಕಮಲ್ಲನಹೊಳೆ ಗ್ರಾಮದ ದಿನೇಶ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಗ್ರಾಮದಲ್ಲಿನ ವಿವಿಧ ಸಮುದಾಯಗಳ ನಡುವೆ ದ್ವೇಷಭಾವನೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆ ತರುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ನಿರೀಕ್ಷಕ ಸಿದ್ರಾಮಯ್ಯ ಬಿ.ಎಂ., ಪೊಲೀಸ್ ಉಪನಿರೀಕ್ಷಕ ಧರೇಪ್ಪ ಬಾಳಪ್ಪ ದೊಡಮನಿ ಹಾಗೂ ಸಿಬ್ಬಂದಿಗಳಾದ ಪಕ್ಷಣ್ಣ, ಶ್ರೀನಿವಾಸಮೂರ್ತಿ, ನಾಗಭೂಷಣ ಮತ್ತು ಬಸವರಾಜ್ ಅವರ ಕಾರ್ಯವನ್ನು ಎಸ್ಪಿ ಡಾ.ಎಚ್.ಟಿ. ಶೇಖರ್ ಶ್ಲಾಘಿಸಿದ್ದಾರೆ.