SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಪ್ರಜಾ ಸೇವೆ ಮೂಲಕ ಜನಸ್ಪಂದನಾ ಕಾರ್ಯಕ್ರಮ

ಪ್ರಜಾ ಸೇವೆ ಮೂಲಕ ಜನಸ್ಪಂದನಾ ಕಾರ್ಯಕ್ರಮ

0
52

ದಾವಣಗೆರೆ: ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಜಾ ಸೇವೆ ಹೆಸರಿನ ಹೊಸ ವ್ಯವಸ್ಥೆಯನ್ನು ಆರಂಭಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಪ್ರಜಾ ಸೇವೆ ಮೂಲಕ ರಾಜ್ಯಾದ್ಯಂತ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಕೇಂದ್ರ ನಗರಾಭಿವೃದ್ಧಿ ಖಾತೆ ರಾಜ್ಯ ಸಚಿವರನ್ನು ಭೇಟಿ ಮಾಡಿ 15ನೇ ಹಣಕಾಸು ಆಯೋಗದ ಬಾಕಿ ಇರುವ 820 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅನುದಾನ ಅಗತ್ಯವಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಚುನಾವಣಾ ಆಯೋಗ ಸೂಚನೆ ನೀಡಿದ ಬಳಿಕ ಚುನಾವಣೆ ನಡೆಸಲಾಗುವುದು. ಆಗಸ್ಟ್‌ನಲ್ಲಿ ಜಿಬಿಎ ನಡೆಸುವಂತೆ ನ್ಯಾಯಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ, ಅದರಂತೆ ಕ್ರಮ ಕೈಗೊಳ್ಳಲಾಗುವುದು. ದಾವಣಗೆರೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದರು.