SK Home Ad
Home ಸುದ್ದಿ ದೇಶ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

0
85

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಶನಿವಾರ (ಜುಲೈ 4) ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಜ್ವರ, ಮೈಕೈ ನೋವು ಹಾಗೂ ದೌರ್ಬಲ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಅವರನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಮೂಲಗಳ ಪ್ರಕಾರ, ಆರಂಭದಲ್ಲಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ಆದರೆ ಆರೋಗ್ಯದಲ್ಲಿ ನಿರೀಕ್ಷಿತ ಮಟ್ಟದ ಸುಧಾರಣೆ ಕಂಡುಬರದ ಕಾರಣ ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳಿಗಾಗಿ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ವೈದ್ಯಕೀಯ ತಪಾಸಣೆಗಳನ್ನು ವೈದ್ಯರು ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹಾವೇರಿ ಮೂಲದ ಯೋಧ ಯಶೋಧರ ಕರ್ತವ್ಯದ ವೇಳೆ ಹುತಾತ್ಮ

ಆಸ್ಪತ್ರೆಯ ಮೂಲಗಳ ಮಾಹಿತಿ ಪ್ರಕಾರ, ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ತಜ್ಞ ವೈದ್ಯರ ವಿಶೇಷ ತಂಡವು ನಿರಂತರವಾಗಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

ಆಸ್ಪತ್ರೆಗೆ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಸಂಕ್ಷಿಪ್ತವಾಗಿ ಮಾತನಾಡಿದ ಏಕನಾಥ್ ಶಿಂಧೆ, “ನಾನು ಚೆನ್ನಾಗಿದ್ದೇನೆ, ಚಿಂತಿಸುವ ಅಗತ್ಯವಿಲ್ಲ” ಎಂದು ಹೇಳಿ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಕಾರ್ಯಕ್ರಮಗಳು, ವಿಧಾನಮಂಡಲದ ಕಲಾಪಗಳು ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ ಶಿಂಧೆ ಅವರಿಗೆ ಕೆಲಸದ ಒತ್ತಡ ಮತ್ತು ದೈಹಿಕ ಆಯಾಸವೂ ಆರೋಗ್ಯ ಸಮಸ್ಯೆಗೆ ಕಾರಣವಾಗಿರಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೈದ್ಯಕೀಯ ದೃಢೀಕರಣ ಹೊರಬಿದ್ದಿಲ್ಲ.

ಇದನ್ನೂ ಓದಿ: ಹುಬ್ಬಳ್ಳಿಗೆ ಮೇಯರ್, ಧಾರವಾಡಕ್ಕೆ ಉಪ ಮೇಯರ್ ಸ್ಥಾನ ಫಿಕ್ಸ್!

ವೈದ್ಯರ ಸಲಹೆಯಂತೆ ಅಗತ್ಯ ಪರೀಕ್ಷೆಗಳು ಪೂರ್ಣಗೊಂಡ ಬಳಿಕ ಅವರ ಆರೋಗ್ಯದ ಸ್ಥಿತಿಯನ್ನು ಆಧರಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ