SK Home Ad
Home ನಮ್ಮ ಜಿಲ್ಲೆ ಕಲಬುರಗಿ ಬರ ನಿರ್ವಹಣೆಗೆ ಸರ್ಕಾರ ಸಜ್ಜು: ಕಲಬುರಗಿಯಲ್ಲಿ ಸುದೀರ್ಘ ಚರ್ಚೆ

ಬರ ನಿರ್ವಹಣೆಗೆ ಸರ್ಕಾರ ಸಜ್ಜು: ಕಲಬುರಗಿಯಲ್ಲಿ ಸುದೀರ್ಘ ಚರ್ಚೆ

0
111

ಕಲಬುರಗಿಯಲ್ಲಿ ಬರ ಪರಿಸ್ಥಿತಿ ಅವಲೋಕನ ಸಭೆ ಆರಂಭ; ಕುಡಿಯುವ ನೀರು, ಮೇವು ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ

ಸಂ.ಕ.‌ ಸಮಾಚಾರ ಕಲಬುರಗಿ: ರಾಜ್ಯದಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ಕಲಬುರಗಿ ವಿಭಾಗದ ಬರ ಪರಿಸ್ಥಿತಿ ಅವಲೋಕನ ಸಭೆ ಆರಂಭಗೊಂಡಿದೆ. ಸಭೆಯಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮೇವು ಕೊರತೆ, ಕೃಷಿ ನಷ್ಟ, ನೀರಾವರಿ, ಬೆಳೆ ಪರಿಸ್ಥಿತಿ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಜಿಲ್ಲಾವಾರು ಮಾಹಿತಿ ಸಲ್ಲಿಸಿದರು.

ಇದನ್ನೂ ಓದಿ: ಪದ್ಮಶ್ರೀ ಪುರಸ್ಕೃತ, ‘ಬ್ರಿಡ್ಜ್ ಮ್ಯಾನ್’ ಖ್ಯಾತಿಯ ಗಿರೀಶ್ ಭಾರದ್ವಜ್ ನಿಧನ

ಬರ ನಿರ್ವಹಣೆಗೆ ಸಮನ್ವಯ ಕ್ರಮಕ್ಕೆ ಒತ್ತು : ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ, ಜಾನುವಾರುಗಳಿಗೆ ಮೇವು ಬ್ಯಾಂಕ್ ಸ್ಥಾಪನೆ, ಮೇವು ವಿತರಣಾ ಕೇಂದ್ರಗಳ ನಿರ್ವಹಣೆ, ಕೃಷಿ ಹಾನಿ ಮೌಲ್ಯಮಾಪನ ಹಾಗೂ ರೈತರಿಗೆ ಅಗತ್ಯ ನೆರವು ನೀಡುವ ಕುರಿತು ಚರ್ಚೆ ನಡೆಯಿತು.

ಜಿಲ್ಲಾಡಳಿತಗಳು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರೆ, ಬರ ಪರಿಸ್ಥಿತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಇದನ್ನೂ ಓದಿ: ಬರಗಾಲ, ರೈತರ ಸಂಕಷ್ಟದತ್ತ ಸರ್ಕಾರದ ಗಮನ: CM ಡಿ.ಕೆ. ಶಿ ಭರವಸೆ

ಹಲವು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಭಾಗಿ: ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸೇರಿದಂತೆ ಹಲವು ಸಚಿವರು ಭಾಗವಹಿಸಿದರು.

ಇದರೊಂದಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ ಗಿರಿನಾಥ, ಅಭಿವೃದ್ಧಿ ಆಯುಕ್ತೆ ಉಮಾ ಮಹಾದೇವನ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಹಾಗೂ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ‘PDO ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ’– ಡೆತ್‌ನೋಟ್‌ನಲ್ಲಿ ಆರೋಪ

ಏಳು ಜಿಲ್ಲೆಗಳ ಅಧಿಕಾರಿಗಳಿಂದ ವರದಿ : ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ), ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ನೀರಾವರಿ ಸೇರಿದಂತೆ ವಿವಿಧ ಇಲಾಖೆಗಳ ವಿಭಾಗೀಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಜಿಲ್ಲೆಗಳ ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಬೆಳೆ ನಷ್ಟ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸ್ಸಿಮ್ ಸಭೆಗೆ ಸ್ವಾಗತ ಕೋರಿದರು.

ಇದನ್ನೂ ಓದಿ: ‘AMMA ಸದಸ್ಯತ್ವಕ್ಕೆ ನಟಿಯರಾದ ರೇವತಿ, ಪದ್ಮಪ್ರಿಯಾ ರಾಜೀನಾಮೆ!

ಬರದ ಅಂಕಿ-ಅಂಶಗಳ ಪ್ರಸ್ತುತಿ : ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ವಿಭಾಗದ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಅವರು ಕಲ್ಯಾಣ ಕರ್ನಾಟಕ ಭಾಗದ ಬರ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಅಂಕಿ-ಅಂಶಗಳ ಸಮಗ್ರ ವಿವರವನ್ನು ಸಭೆಯ ಮುಂದೆ ಮಂಡಿಸಿದರು.

ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾವಾರು ಕಾರ್ಯಯೋಜನೆ ರೂಪಿಸುವತ್ತ ಒತ್ತು ನೀಡಿದ್ದು, ಜನರು ಹಾಗೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.