SK Home Ad
Home ನಮ್ಮ ಜಿಲ್ಲೆ ವಿಜಯಪುರ ಲಾರಿ-ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ಲಾರಿ-ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

0
32

ವಿಜಯಪುರ: ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50 ನಲ್ಲಿ ನಡೆದಿದೆ.

ವಿಜಯಪುರ ಮೂಲದ ಭೂಷನ್ ನಾಯಕ (24), ಗಗನ್ ಪರಮೇಶ (19) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪಾದಚಾರಿ ಬಿಲಾಲ್ ಜಾತಗಾರ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.