SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ಶಾಕ್

ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರ ಶಾಕ್

0
421

ಚಿತ್ರದುರ್ಗ: ಜಿಲ್ಲೆಯಲ್ಲಿ ಭ್ರಷ್ಟಾಚಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎರಡು ಕಡೆ ಏಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬುಧವಾರ ಬೆಳಗ್ಗೆ 6 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಮೊದಲು ಬಬ್ಬೂರು ತೋಟಗಾರಿಕೆ ವಿವಿ ಪ್ರಾಧ್ಯಾಪಕ ಪ್ರೊ. ಶಂಕರ್ ಅವರ ಮನೆಗೆ ದಾಳಿ ನಡೆಸಿತು.

ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಬಬ್ಬೂರು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಪ್ರೊಫೆಸರ್ ಆಗಿರುವ ಶಂಕರ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದರು.

ಆದಾಯಕ್ಕೆ ಮೀರಿದ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಈ ದಾಳಿ ನಡೆದಿದೆ. ಲೋಕಾಯುಕ್ತ ತಂಡ ಮನೆಯಲ್ಲಿರುವ ದಾಖಲೆಗಳು, ಬ್ಯಾಂಕ್ ಪಾಸ್‌ಬುಕ್, ಆಸ್ತಿ ಪತ್ರಗಳನ್ನು ಪರಿಶೀಲಿಸಿತು.

ಇದೇ ವೇಳೆ ನಗರದ ಮತ್ತೊಂದು ಕಡೆ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ RFO ದುಗ್ಗಪ್ಪ ಅವರ ಮನೆ ಮೇಲೂ ಲೋಕಾಯುಕ್ತರು ದಾಳಿ ನಡೆಸಿದರು.

ದುಗ್ಗಪ್ಪ ಅವರ ವಿರುದ್ಧವೂ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲು ಅಧಿಕಾರಿಗಳು ಬೆಳಗ್ಗೆಯೇ ದಾಳಿ ಮಾಡಿದರು.

ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದ ಎರಡು ತಂಡಗಳು ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿದವು. ದಾಳಿಯ ವೇಳೆ ಮನೆಯಲ್ಲಿದ್ದ ದಾಖಲೆಗಳು, ಆಸ್ತಿ ವಿವರ, ಚಿನ್ನಾಭರಣ, ನಗದು, ಬ್ಯಾಂಕ್ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.

ಬೆಳ್ಳಂಬೆಳಗ್ಗೆ ಲೋಕಾಯುಕ್ತರ ದಾಳಿ ನಡೆದ ಹಿನ್ನೆಲೆಯಲ್ಲಿ ಬಬ್ಬೂರು ಗ್ರಾಮ ಮತ್ತು RFO ದುಗ್ಗಪ್ಪ ಅವರ ನಿವಾಸದ ಸುತ್ತಲೂ ಕುತೂಹಲ ಮೂಡಿತ್ತು. ಸ್ಥಳೀಯರು ಏನಾಗುತ್ತಿದೆ ಎಂದು ನೋಡಲು ಜಮಾಯಿಸಿದ್ದರು.