SK Home Ad
Home ಸುದ್ದಿ ರಾಜ್ಯ ರಾಜ್ಯದಲ್ಲೂ ದೇವಸ್ಥಾನಗಳಲ್ಲಿ ಕಟ್ಟೆಚ್ಚರ, 24 ಗಂಟೆ ಸಿಸಿಟಿವಿ ಕಡ್ಡಾಯ

ರಾಜ್ಯದಲ್ಲೂ ದೇವಸ್ಥಾನಗಳಲ್ಲಿ ಕಟ್ಟೆಚ್ಚರ, 24 ಗಂಟೆ ಸಿಸಿಟಿವಿ ಕಡ್ಡಾಯ

0
40

ಬೆಳಗಾವಿ: ದೇವಸ್ಥಾನಗಳ ಹುಂಡಿ, ಚಿನ್ನ ಮತ್ತು ಬೆಳ್ಳಿ ವಸ್ತುಗಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು, ಅಯೋಧ್ಯೆ ರಾಮಮಂದಿರದಲ್ಲೇ ಕಳ್ಳತನ ಅವಮಾನಕರ ಎಂದ ಅವರು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಸಿಸಿಟಿವಿ ವ್ಯವಸ್ಥೆ ಅಳವಡಿಸಲು ಸೂಚಿಸಲಾಗಿದೆ. ಹುಂಡಿ ತೆರೆಯುವುದು, ಹಣ ಹೊರ ತೆಗೆಯುವುದು, ಎಣಿಕೆ ಮಾಡುವುದು ಮತ್ತು ಪುನಃ ಬೀಗ ಹಾಕುವವರೆಗಿನ ಸಂಪೂರ್ಣ ಪ್ರಕ್ರಿಯೆ ಕ್ಯಾಮೆರಾದಲ್ಲಿ ದಾಖಲಾಗಬೇಕು. ದೃಶ್ಯಾವಳಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸಂಬಂಧಪಟ್ಟ ಪೊಲೀಸ್ ವೃತ್ತ ನಿರೀಕ್ಷಕ ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಗೆ ಸಂಪರ್ಕಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.