SK Home Ad
Home ನಮ್ಮ ಜಿಲ್ಲೆ ಬೆಂಗಳೂರು ‘PRC’ ವಿರುದ್ಧ ಅಮಿತ್ ಶಾಗೆ ಪತ್ರ ಬರೆದ ಸಚಿವೆ ಶೋಭಾ ಕರಂದ್ಲಾಜೆ

‘PRC’ ವಿರುದ್ಧ ಅಮಿತ್ ಶಾಗೆ ಪತ್ರ ಬರೆದ ಸಚಿವೆ ಶೋಭಾ ಕರಂದ್ಲಾಜೆ

0
71

ಬೆಂಗಳೂರು : ಕರ್ನಾಟಕ ಸರ್ಕಾರ ಹೊರಡಿಸಿರುವ ‘ಕರ್ನಾಟಕ ಖಾಯಂ ನಿವಾಸಿ ಪ್ರಮಾಣಪತ್ರ (PRC), 2026’ ಅಧಿಸೂಚನೆಗೆ ಸಂಬಂಧಿಸಿದಂತೆ ತಕ್ಷಣ ಮಧ್ಯಪ್ರವೇಶಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಬರೆದಿರುವ ಪತ್ರದಲ್ಲಿ, ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಖಾಯಂ ನಿವಾಸಿ ಪ್ರಮಾಣಪತ್ರ ವ್ಯವಸ್ಥೆಯು ಗಂಭೀರ ಸಾಂವಿಧಾನಿಕ, ಕಾನೂನು ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಆತಂಕಗಳನ್ನು ಹುಟ್ಟುಹಾಕಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧ – ಶೋಭಾ ಆರೋಪ: ಭಾರತದ ಸಂವಿಧಾನವು ದೇಶದಾದ್ಯಂತ ಎಲ್ಲಾ ನಾಗರಿಕರಿಗೆ ಏಕರೂಪದ ಪೌರತ್ವವನ್ನು ಕಲ್ಪಿಸಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ “ಖಾಯಂ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿರುವುದು ಸಾಂವಿಧಾನಿಕ ಚೌಕಟ್ಟಿಗೆ ವಿರುದ್ಧವಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸಂವಿಧಾನದ 14ನೇ ವಿಧಿ ಎಲ್ಲಾ ನಾಗರಿಕರಿಗೆ ಸಮಾನತೆಯ ಹಕ್ಕನ್ನು ನೀಡುತ್ತದೆ. ಆದರೆ ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ “ಖಾಯಂ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸುವುದು ಕಾನೂನುಬದ್ಧವಾಗಿ ಪ್ರಶ್ನಾರ್ಹವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉಡುಪಿಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿ: ಏಳು ಮಂದಿಗೆ ಗಾಯ

ಅಕ್ರಮ ವಲಸಿಗರಿಗೆ ಅವಕಾಶ ಸಿಗುವ ಆತಂಕ : ಪತ್ರದಲ್ಲಿ ರಾಷ್ಟ್ರೀಯ ಭದ್ರತೆಯ ವಿಚಾರವನ್ನೂ ಉಲ್ಲೇಖಿಸಿರುವ ಶೋಭಾ ಕರಂದ್ಲಾಜೆ, ಪಿಆರ್‌ಸಿ ನೀಡುವ ಮಾನದಂಡಗಳು ಸ್ಥಳೀಯ ದಾಖಲೆಗಳು ಹಾಗೂ ಕಂದಾಯ ಅಧಿಕಾರಿಗಳ ಪರಿಶೀಲನೆಗೆ ಹೆಚ್ಚು ಅವಲಂಬಿತವಾಗಿರುವುದರಿಂದ, ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ವ್ಯಕ್ತಿಗಳು ಅಥವಾ ವಿದೇಶಿ ಪ್ರಜೆಗಳು ಕೂಡ ವಂಚನೆಯ ಮೂಲಕ ಈ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಮ್ಮೆ ಪಿಆರ್‌ಸಿ ಪಡೆದ ನಂತರ, ಅದನ್ನು ವಿವಿಧ ಸರ್ಕಾರಿ ಸೌಲಭ್ಯಗಳು, ಶೈಕ್ಷಣಿಕ ಪ್ರವೇಶಗಳು, ಉದ್ಯೋಗಾವಕಾಶಗಳು ಹಾಗೂ ಇತರ ಹಕ್ಕುಗಳನ್ನು ಪಡೆಯಲು ಬಳಸಿಕೊಳ್ಳಬಹುದಾಗಿದೆ. ಇದರಿಂದ ಅಕ್ರಮ ವಾಸ್ತವ್ಯಕ್ಕೆ ಪರೋಕ್ಷವಾಗಿ ಕಾನೂನುಬದ್ಧತೆ ಸಿಗುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಧಕ್ಕೆ? : ಪೌರತ್ವ, ವಿದೇಶಿಯರು, ವಲಸೆ ಹಾಗೂ ಆಂತರಿಕ ಭದ್ರತೆ ಕುರಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಟ್ಟಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಖಾಯಂ ನಿವಾಸಿ ಸ್ಥಾನಮಾನ ನೀಡಲು ಮುಂದಾಗಿರುವುದು ಕೇಂದ್ರದ ಅಧಿಕಾರ ವ್ಯಾಪ್ತಿಗೆ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಶೋಭಾ ಕರಂದ್ಲಾಜೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ‘ಶ್ರೀ ರಾಮ ಭೂಮಿ’ ಚಿತ್ರದಲ್ಲಿ ಅನುಪಮ್ ಖೇರ್ ಹೊಸ ಲುಕ್

ಸರಿಯಾದ ಪೌರತ್ವ ಪರಿಶೀಲನೆಯಿಲ್ಲದೆ ಇಂತಹ ಪ್ರಮಾಣಪತ್ರಗಳನ್ನು ನೀಡಿದರೆ, ಅಕ್ರಮ ವಲಸಿಗರು ಆಡಳಿತಾತ್ಮಕ ವ್ಯವಸ್ಥೆಯಲ್ಲಿ ವಿಲೀನಗೊಳ್ಳುವ ಸಾಧ್ಯತೆ ಇದೆ. ಇದು ರಾಷ್ಟ್ರೀಯ ಭದ್ರತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.