SK Home Ad
Home ನಮ್ಮ ಜಿಲ್ಲೆ ದಾವಣಗೆರೆ ರಾಜ್ಯದಲ್ಲಿ ತೀವ್ರ ಬರಗಾಲ: ತಕ್ಷಣವೇ ಅಧಿವೇಶನಕ್ಕೆ ಆಗ್ರಹ

ರಾಜ್ಯದಲ್ಲಿ ತೀವ್ರ ಬರಗಾಲ: ತಕ್ಷಣವೇ ಅಧಿವೇಶನಕ್ಕೆ ಆಗ್ರಹ

0
61

ದಾವಣಗೆರೆ: ರಾಜ್ಯದಲ್ಲಿ ತೀವ್ರ ಬರಗಾಲ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಕೊರತೆ ಹಾಗೂ ಜಾನುವಾರುಗಳಿಗೆ ಮೇವಿನ ಅಭಾವ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ತಲೆದೋರಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ವಿಧಾನಮಂಡಲದ ಅಧಿವೇಶನ ಕರೆಯಬೇಕು ಎಂದು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆಗ್ರಹಿಸಿದರು.

ಶನಿವಾರ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ. ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಮುಂದಿನ ದಿನಗಳಲ್ಲಿ ವಿದ್ಯುತ್ ಕೊರತೆ ಹಾಗೂ ಜಾನುವಾರುಗಳಿಗೆ ಮೇವಿನ ಅಭಾವವೂ ಎದುರಾಗುವ ಭೀತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ: ಹೊಸ ಡೇಟ್ ಫಿಕ್ಸ್

ಬರಪೀಡಿತ ಪ್ರದೇಶ ಘೋಷಣೆಯಲ್ಲೂ ವಿಳಂಬ : ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಸರ್ಕಾರ ಎಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂಬ ಪ್ರಾಥಮಿಕ ಸಮೀಕ್ಷೆಯನ್ನೇ ಆರಂಭಿಸಿಲ್ಲ ಎಂದು ಆರೋಪಿಸಿದ ಅವರು, ಸಚಿವ ಸಂಪುಟ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿಲ್ಲ : ಪ್ರಕೃತಿ ವಿಕೋಪ ಮತ್ತು ಬರಗಾಲದ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ ನೀಡಬೇಕಾಗಿತ್ತು. ಆದರೆ ಯಾವುದೇ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳು ಹಾಗೂ ಅಗತ್ಯ ಅನುದಾನದ ಕುರಿತು ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: DCM ಪವನ್‌ಗೆ ಶಸ್ತ್ರಚಿಕಿತ್ಸೆ : 2 ತಿಂಗಳ ಬಳಿಕ ಮತ್ತೊಂದು ಸರ್ಜರಿ!

ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ವಿಳಂಬಕ್ಕೆ ಆಕ್ಷೇಪ : ಸರ್ಕಾರದ ವತಿಯಿಂದ ನಡೆಸಲಾದ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸುಮಾರು 450 ಕೋಟಿಗೂ ಅಧಿಕ ಸಾರ್ವಜನಿಕ ಹಣವನ್ನು ಖರ್ಚು ಮಾಡಲಾಗಿದೆ. ಸಮೀಕ್ಷೆ ಪೂರ್ಣಗೊಂಡು ಎಂಟು-ಒಂಬತ್ತು ತಿಂಗಳು ಕಳೆದಿದ್ದರೂ, ಅದರ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸದೇ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದರು.

ಇದರಿಂದ ಸಾರ್ವಜನಿಕರಲ್ಲಿ ಹಲವು ಅನುಮಾನಗಳು ಮೂಡುತ್ತಿವೆ. ನೂತನ ಮುಖ್ಯಮಂತ್ರಿಗಳು ಕೂಡ ಈ ವಿಷಯದ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ CM ವಿ.ಡಿ. ಸತೀಶನ್ ಭೇಟಿ

ವಿಧಾನಸಭೆಯಲ್ಲಿ ವರದಿ ಮಂಡಿಸಲು ಒತ್ತಾಯ : ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂಕಿ-ಅಂಶಗಳ ಆಧಾರದ ಮೇಲೆಯೇ ಸರ್ಕಾರದ ಯೋಜನೆಗಳು ರೂಪುಗೊಳ್ಳಬೇಕು. ಸರಿಯಾದ ಮಾಹಿತಿಯಿಲ್ಲದೆ ಯಾವುದೇ ಯೋಜನೆ ಯಶಸ್ವಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ತಕ್ಷಣವೇ ಈ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ನೀಡಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದರು.

ಜನವರಿ ಹಾಗೂ ಮಾರ್ಚ್ ತಿಂಗಳ ಅಧಿವೇಶನ ಮತ್ತು ಬಜೆಟ್‌ನಲ್ಲಿಯೂ ಈ ವರದಿ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ. ಇದೀಗ ಜುಲೈ ತಿಂಗಳು ಬಂದರೂ ವರದಿ ಮಂಡಿಸದಿರುವುದು ವರದಿಯನ್ನು ರಹಸ್ಯವಾಗಿಡುವ ಅಥವಾ ಕೈಬಿಡುವ ಪ್ರಯತ್ನವೇ ಎಂಬ ಅನುಮಾನ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.