ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಸಿಎಂ ರಹಸ್ಯ ಸಭೆ; ಹಿರಿಯೂರು ಉಪಚುನಾವಣೆಗೆ ಸುಹಾಸ್ ಸುಧಾಕರ್ ಹೆಸರು ಮುನ್ನೆಲೆಗೆ?
ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಹತ್ವದ ರಹಸ್ಯ ಸಭೆ ನಡೆದಿದ್ದು, ಕಾಂಗ್ರೆಸ್ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಎನ್.ವೈ. ಗೋಪಾಲಕೃಷ್ಣ, ಟಿ. ರಘುಮೂರ್ತಿ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ನಿಗಮ ಅಧ್ಯಕ್ಷರಾದ ಡಾ. ಯೋಗೀಶ್ ಬಾಬು, ಜಿ.ಎಸ್. ಮಂಜುನಾಥ್, ಪಿ. ರಘು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್
ಇದೇ ವೇಳೆ, ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸುಧಾಕರ್ ಸಭೆಯಲ್ಲಿ ಭಾಗವಹಿಸಿರುವುದು ವಿಶೇಷ ಗಮನ ಸೆಳೆದಿದೆ. ಇದರಿಂದ ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುಹಾಸ್ ಸುಧಾಕರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಜುಲೈ 26ರಂದು ಡಿ. ಸುಧಾಕರ್ ನುಡಿ ನಮನ ಕಾರ್ಯಕ್ರಮ : ಸಭೆಯಲ್ಲಿ ಜುಲೈ 26ರಂದು ಹಿರಿಯೂರಿನಲ್ಲಿ ನಡೆಯಲಿರುವ ದಿವಂಗತ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದ ಕುರಿತು ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್
ಸುಹಾಸ್ ಸುಧಾಕರ್ ಅವರನ್ನು ಸಭೆಗೆ ಆಹ್ವಾನಿಸಿ, ಮುಖಂಡರೊಂದಿಗೆ ಚರ್ಚೆಯಲ್ಲಿ ಭಾಗಿಯಾಗುವಂತೆ ಮಾಡಿರುವುದು ಕಾಂಗ್ರೆಸ್‌ನ ಮುಂದಿನ ರಾಜಕೀಯ ನಡೆ ಕುರಿತು ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಇದನ್ನು ಪರೋಕ್ಷವಾಗಿ ಸುಹಾಸ್ ಅವರಿಗೆ ಪಕ್ಷದಿಂದ ಸಂದೇಶ ನೀಡಿದಂತೆಯೇ ಎನ್ನಲಾಗುತ್ತಿದೆ.
ಉಪಚುನಾವಣೆ ಮೇಲೆ ಕಾಂಗ್ರೆಸ್ ಫೋಕಸ್ : ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಪಕ್ಷದ ಮುಖಂಡರು ಮತ್ತು ಶಾಸಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಕ್ರಮ ಆರೋಪದ ಬೆನ್ನಲ್ಲೇ KPSC ಅಧ್ಯಕ್ಷ ಸಾಹುಕಾರ್ ಅಮಾನತು
ಸಭೆಯ ಬಳಿಕ ಮುಖ್ಯಮಂತ್ರಿ ಪಕ್ಷದ ಮುಖಂಡರೊಂದಿಗೆ ಕಾಫಿ ಸವಿದು ಅನೌಪಚಾರಿಕ ಮಾತುಕತೆ ನಡೆಸಿದ್ದು, ಉಪಚುನಾವಣೆಗೆ ಸಂಬಂಧಿಸಿದ ತಂತ್ರಗಾರಿಕೆಯ ಕುರಿತು ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಚಿತ್ರದುರ್ಗದಲ್ಲೇ ಪ್ರಗತಿ ಪರಿಶೀಲನಾ ಸಭೆ? : ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಚಿತ್ರದುರ್ಗದಲ್ಲೇ ನಡೆಸುವ ಕುರಿತು ಕೂಡ ಸಭೆಯಲ್ಲಿ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ರಾಜಕೀಯ ಚಟುವಟಿಕೆಗಳನ್ನು ಒಂದೇ ವೇದಿಕೆಯಲ್ಲಿ ಸಮನ್ವಯಗೊಳಿಸುವ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ನೇಪಾಳದಲ್ಲಿ ಬೆಳಗಾವಿ ಯುವಕನ ಹತ್ಯೆ: ರೂಮ್‌ಮೇಟ್ ವಿರುದ್ಧ ಆರೋಪ
ಹಿರಿಯೂರು ಉಪಚುನಾವಣೆಯ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಕಾಂಗ್ರೆಸ್ ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಸುಹಾಸ್ ಸುಧಾಕರ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿರುವುದು ಕ್ಷೇತ್ರದ ರಾಜಕೀಯಕ್ಕೆ ಹೊಸ ತಿರುವು ನೀಡಿದೆ.






















