SK Home Ad
Home ನಮ್ಮ ಜಿಲ್ಲೆ ಧಾರವಾಡ ಗ್ಯಾಸ್ ಗೀಸರ್ ಸಿಲಿಂಡರ್ ಸೋರಿಕೆ ದುರಂತ: ಮೂವರಿಗೆ ಗಂಭೀರ ಗಾಯ

ಗ್ಯಾಸ್ ಗೀಸರ್ ಸಿಲಿಂಡರ್ ಸೋರಿಕೆ ದುರಂತ: ಮೂವರಿಗೆ ಗಂಭೀರ ಗಾಯ

0
224

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯನಗರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಗ್ಯಾಸ್ ಸೋರಿಕೆ ಸಂಬಂಧಿತ ಅಗ್ನಿ ಅವಘಡದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಹುಬ್ಬಳ್ಳಿಯ ಕೆಎಂಸಿಆರ್‌ಐ (KIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡವರನ್ನು ಸಾಹೀರಾಬಾನು ಧಾರವಾಡ (55), ಅವರ ಪುತ್ರರಾದ ಅಬ್ಬಾಸ್ ಅಲಿ ಧಾರವಾಡ (29) ಹಾಗೂ ಹಸನಸಾಬ್ ಧಾರವಾಡ (26) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ‘ಕರಾವಳಿ’ ಕಿರಿಕ್: ವಿವಾದಕ್ಕೆ ಬೇಸರ – ರಾಜ್ ಬಿ ಶೆಟ್ಟಿ ಭಾವುಕ ಮನವಿ

ಗ್ಯಾಸ್ ಸೋರಿಕೆಯಿಂದ ಅವಘಡ : ಮಾಹಿತಿಯ ಪ್ರಕಾರ, ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಮನೆಯಲ್ಲಿದ್ದ ಗ್ಯಾಸ್ ಗೀಸರ್‌ಗೆ ಅಳವಡಿಸಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿದೆ ಎನ್ನಲಾಗಿದೆ. ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಮನೆಯೊಳಗಿದ್ದ ಮೂವರು ಗಂಭೀರವಾಗಿ ಸುಟ್ಟು ಗಾಯಗೊಂಡಿದ್ದಾರೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ಇತರ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಿಯಂತ್ರಣ : ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅವರ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ಪಕ್ಕದ ಮನೆಗಳಿಗೆ ವ್ಯಾಪಿಸುವುದನ್ನು ತಡೆಯಲಾಯಿತು.

ಇದನ್ನೂ ಓದಿ: ಭಟ್ರ ಸಾಹಿತ್ಯ, ಶರಣ್ ಧ್ವನಿ: ಗೆಳೆಯರ ಮನಗೆದ್ದ ‘ಚಡ್ಡಿ ಬಡ್ಡಿ’ ಹಾಡು!

ಪೊಲೀಸ್ ಪರಿಶೀಲನೆ : ಅಗ್ನಿ ಅವಘಡದ ಮಾಹಿತಿ ಪಡೆದ ಅಣ್ಣಿಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಉಮಾದೇವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ತಹಶೀಲ್ದಾರ ಮಂಜುನಾಥ ದಾಸಪ್ಪನವರ, ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ ಬೇಟಿ ನೀಡಿ ನೀಡಿದ್ದಾರೆ ಗ್ಯಾಸ್ ಸೋರಿಕೆಯಿಂದಲೇ ಈ ಅವಘಡ ಸಂಭವಿಸಿರುವ ಸಾಧ್ಯತೆ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ಅಗ್ನಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಮುಂದಿನ ತನಿಖೆ ಮುಂದುವರಿದಿದೆ.