ಕಾರ್‌ನಲ್ಲಿ ಬೆಂಕಿ: ಪ್ರಾಣಾಪಾಯದಿಂದ ಪಾರು

0
10

ಕೊಪ್ಪಳ: ಚಲಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್‌ನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದ ಗಂಜ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಹೊಸಪೇಟೆಯಿಂದ ಕಾರ್ ಮೂಲಕ ಕಿನ್ನಾಳ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದರು. ತಕ್ಷಣವೇ ಕಾರ್‌ನ್ನು ನಿಲ್ಲಿಸಿ ಹೊರಬಂದ ಇಬ್ಬರು, ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಕೊಪ್ಪಳ ನಗರ ಸಂಚಾರಿ‌ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

Previous articleಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್ ಅಶೋಕ್ ಮುಕ್ತ
Next articleಕುಮಾರಸ್ವಾಮಿಯವರಿಂದ ವಿಷ ಬೀಜ ಬಿತ್ತುವ ಕೆಲಸ