SK Home Ad
Home ಸುದ್ದಿ ರಾಜ್ಯ ಆಡಳಿತದಲ್ಲಿ ಭಾರಿ ಬದಲಾವಣೆ: ಅಧಿಕಾರಿಗಳ ದಿಢೀರ್ ವರ್ಗಾವಣೆ!

ಆಡಳಿತದಲ್ಲಿ ಭಾರಿ ಬದಲಾವಣೆ: ಅಧಿಕಾರಿಗಳ ದಿಢೀರ್ ವರ್ಗಾವಣೆ!

0
213

ಬೆಂಗಳೂರು: ರಾಜ್ಯ ಆಡಳಿತದಲ್ಲಿ ಮಹತ್ವದ ಬದಲಾವಣೆಗಳನ್ನು ಮುಂದುವರಿಸಿರುವ ಕರ್ನಾಟಕ ಸರ್ಕಾರ ಸೋಮವಾರ ಐಎಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಹೆಚ್ಚುವರಿ ಹೊಣೆಗಾರಿಕೆಗಳಿಗೆ ಸಂಬಂಧಿಸಿದ ಆದೇಶ ಹೊರಡಿಸಿದೆ. ಇದರೊಂದಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳ ವಿರುದ್ಧ ದೊಡ್ಡ ಮಟ್ಟದ ಆಡಳಿತಾತ್ಮಕ ಕ್ರಮ ಕೈಗೊಂಡಿದ್ದು, ಒಟ್ಟು 160 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಐಎಎಸ್ ಅಧಿಕಾರಿಗಳಿಗೆ ಹೊಸ ಜವಾಬ್ದಾರಿ : ರಾಜ್ಯ ಸರ್ಕಾರದ ಆದೇಶದಂತೆ, ಪಶು ವೈದ್ಯಕೀಯ ಹಾಗೂ ಪಶುಸಂಗೋಪನೆ ಸೇವೆಗಳ ಇಲಾಖೆಯ ಆಯುಕ್ತೆ ಸಿ.ಟಿ. ಶಿಲ್ಪಾನಾಗ್ ಅವರಿಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (KSIC) ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಕಾರ್ಯಭಾರ ವಹಿಸಲಾಗಿದೆ.

ಇದನ್ನೂ ಓದಿ: ತ್ರಿಪುರ DGP ಅನುರಾಗ್ ಧಂಕರ್ ನಿಗೂಢ ಸಾವು: ಆತ್ಮಹತ್ಯೆ ಶಂಕೆ

ಇದೇ ವೇಳೆ, ಕೆಎಸ್‌ಐಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಝಹೀರಾ ನಸೀಂ ಅವರನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರ ಹುದ್ದೆಯಲ್ಲಿಯೇ ಮುಂದುವರಿಸಲಾಗಿದೆ. ಇನ್ನು ಎಲೆಕ್ಟ್ರಾನಿಕ್ಸ್ ಡೆಲಿವರಿ ಆಫ್ ಸಿಟಿಜನ್ಸ್ ಸರ್ವೀಸ್ (EDCS) ನಿರ್ದೇಶಕರಾಗಿರುವ ಭೋಯಾರ್ ಹರ್ಷಲ್ ನಾರಾಯಣರಾವ್ ಅವರಿಗೆ ಸಕಾಲ ಮಿಷನ್‌ನ ಹೆಚ್ಚುವರಿ ಮಿಷನ್ ನಿರ್ದೇಶಕ-2 ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಗಣಿ ಇಲಾಖೆಯಲ್ಲಿ ಭರ್ಜರಿ ವರ್ಗಾವಣೆ : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಸರ್ಕಾರ ಮಹತ್ವದ ಆಡಳಿತಾತ್ಮಕ ಬದಲಾವಣೆ ಕೈಗೊಂಡಿದೆ. ಇಲಾಖೆಯಲ್ಲಿನ ಸುಮಾರು 80 ಪ್ರತಿಶತ ಸಿಬ್ಬಂದಿಯನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರ ಭಾರೀ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ: IPS ತರಬೇತಿ ಅಧಿಕಾರಿ ಆತ್ಮಹತ್ಯೆಗೆ ಯತ್ನ

ಒಟ್ಟು 160 ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಅವರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರು ಸೇರಿದ್ದಾರೆ.

ಒಂದೇ ಸ್ಥಳದಲ್ಲಿ ಸೇವೆಗೆ ಬ್ರೇಕ್ : ಸರ್ಕಾರದ ಆದೇಶದ ಪ್ರಕಾರ, ಇಲಾಖೆಯ ಹಲವು ಅಧಿಕಾರಿಗಳು ವರ್ಷಗಳ ಕಾಲ ತಮ್ಮ ಸ್ವಂತ ಜಿಲ್ಲೆ ಅಥವಾ ನೆರೆಯ ಜಿಲ್ಲೆಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದರು. ಕೆಲವರು ದೀರ್ಘಕಾಲ ಒಂದೇ ಹುದ್ದೆಯಲ್ಲಿ ಮುಂದುವರಿದಿದ್ದರೆ, ಕೆಲವರ ವಿರುದ್ಧ ಆಡಳಿತಾತ್ಮಕ ಹಾಗೂ ಸಾರ್ವಜನಿಕ ದೂರುಗಳೂ ದಾಖಲಾಗಿದ್ದವು.

ಇದನ್ನೂ ಓದಿ: ವಾಂಗ್‌ಚುಕ್ ಆರೋಗ್ಯ ವರದಿ ಕೇಳಿದ ಕೋರ್ಟ್: ಹಿರಿಯ ವೈದ್ಯರಿಗೆ ಹಾಜರಾಗಲು ಸೂಚನೆ

ಈ ಪರಿಸ್ಥಿತಿ ಸ್ಥಳೀಯ ಮಟ್ಟದಲ್ಲಿ ಏಕಸ್ವಾಮ್ಯ, ಸ್ವಹಿತಾಸಕ್ತಿ ಹಾಗೂ ಅಕ್ರಮಗಳಿಗೆ ಅವಕಾಶ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆಡಳಿತದಲ್ಲಿ ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆ ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಆದಾಯ ಸಂಗ್ರಹಣೆಗೆ ಧಕ್ಕೆಯಾಗದಂತೆ ಕ್ರಮ : ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ ಪ್ರಮುಖ ಆದಾಯ ಸಂಗ್ರಹಣಾ ಇಲಾಖೆಗಳಲ್ಲೊಂದು. ಆದ್ದರಿಂದ ಇಲಾಖೆಯ ಕಾರ್ಯಕ್ಷಮತೆಗೆ ಯಾವುದೇ ಅಡಚಣೆಯಾಗದಂತೆ ಅಧಿಕಾರಿಗಳ ವರ್ಗಾವಣೆಯನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ತಿಳಿಸಿದೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣವೇ ಹೊಸ ಕರ್ತವ್ಯ ಸ್ಥಳಕ್ಕೆ ಹಾಜರಾಗಿ, ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: E20 ಎಥೆನಾಲ್ ಇಂಧನದ ಆತಂಕಕ್ಕೆ ಬ್ರೇಕ್: ಕೇಂದ್ರ ಸರ್ಕಾರ ಸ್ಪಷ್ಟನೆ

ಆಡಳಿತದಲ್ಲಿ ಪಾರದರ್ಶಕತೆಗೆ ಒತ್ತು : ರಾಜ್ಯ ಸರ್ಕಾರದ ಈ ಕ್ರಮವನ್ನು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ಪ್ರಯತ್ನವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಗಣಿ ಇಲಾಖೆಯಲ್ಲಿ ದೀರ್ಘಕಾಲ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳನ್ನು ಸ್ಥಳಾಂತರಿಸುವ ಮೂಲಕ ಆಡಳಿತ ಸುಧಾರಣೆ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶವನ್ನು ಸರ್ಕಾರ ಹೊಂದಿದೆ.