SK Home Ad
Home ಸುದ್ದಿ ದೇಶ ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮೂರು ಬೇಡಿಕೆ ಮುಂದಿಟ್ಟ ರಾಹುಲ್

ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮೂರು ಬೇಡಿಕೆ ಮುಂದಿಟ್ಟ ರಾಹುಲ್

0
123

ನವದೆಹಲಿ: ಶಿಕ್ಷಣ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ.

“ದೇಶದ ಯುವಕರ ಭವಿಷ್ಯಕ್ಕೆ ಅತೀ ಹೆಚ್ಚು ಹಾನಿ ಮಾಡಿರುವುದು ನೀವೇ. ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಲು ಅವಕಾಶ ನೀಡಿದ್ದೀರಿ. ಇದಕ್ಕೆ ಕಾರಣರಾದವರನ್ನು ರಕ್ಷಿಸಿದ್ದೀರಿ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

https://x.com/RahulGandhi/status/2080145197745553599

ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ ಎಂದು ಹೇಳಿರುವ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುವಕರ ಕಲ್ಯಾಣ ಕುರಿತ ಹಿಂದಿನ ಪೋಸ್ಟ್ ಅನ್ನು ಉಲ್ಲೇಖಿಸಿ ಈ ಟೀಕೆಗಳನ್ನು ಮಾಡಿದ್ದಾರೆ. “ಯುವಕರ ಕಲ್ಯಾಣ ಮತ್ತು ಭವಿಷ್ಯ ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಅದಕ್ಕೆ ಹಾನಿ ಮಾಡಲು ಪ್ರಯತ್ನಿಸಿದವರನ್ನು ಬಿಡಲಾಗುವುದಿಲ್ಲ ಎಂದು ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದರು. ಆದರೆ ಈಗ ಅವರ ಸರ್ಕಾರ ಈ ಪ್ರತಿಜ್ಞೆ ಮುರಿದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.