SK Home Ad
Home ಕ್ರೀಡೆ IND vs ZIM: ವೈಭವ್‌-ಅಯ್ಯರ್‌ಗೆ ಚೊಚ್ಚಲ ಸಂಭ್ರಮ

IND vs ZIM: ವೈಭವ್‌-ಅಯ್ಯರ್‌ಗೆ ಚೊಚ್ಚಲ ಸಂಭ್ರಮ

0
121

ನವದೆಹಲಿ: ಜಿಂಬಾಬ್ವೆ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಭಾರತಕ್ಕೆ ಇದು ಮೊದಲ ಜಯವಾಗಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತು. ಪ್ರತಿಯಾಗಿ ಭಾರತ ಕೇವಲ 13.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿ ಸುಲಭವಾಗಿ ಗುರಿ ತಲುಪಿತು.

ಭಾರತದ ಗೆಲುವಿನಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮಿಂಚಿದರು. ಕೇವಲ 19 ಎಸೆತಗಳಲ್ಲಿ 50 ರನ್ ಸಿಡಿಸಿದ ಅವರು ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 263.16 ಸ್ಟ್ರೈಕ್‌ರೇಟ್‌ನಲ್ಲಿ ಅಬ್ಬರಿಸಿದರು.

ಇಶಾನ್ ಕಿಶನ್ 24 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ಗಳಿಂದ 35 ರನ್ ಗಳಿಸಿ ಉತ್ತಮ ರನ್‌ ಕಾಣಿಕೆ ನೀಡಿದರು. ನಾಯಕ ಶ್ರೇಯಸ್ ಅಯ್ಯರ್ ಅಜೇಯ 28 ರನ್ ಹಾಗೂ ತಿಲಕ್ ವರ್ಮಾ ಅಜೇಯ 6 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಪರ ವೆಸ್ಲಿ ಮಧೆವೆರೇ 39 ಹಾಗೂ ರಯಾನ್ ಬರ್ಲ್ 26 ರನ್ ಗಳಿಸಿದರೆ, ತಡಿವನಶೆ ಮರುಮಾನಿ ಅಜೇಯ 27 ರನ್‌ ಗಳಿಸಿದರು. ಉಳಿದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ರನ್‌ ಗಳಿಸಲು ಪರದಾಡಿದರು.

ಭಾರತದ ಪರ ಮಯಾಂಕ್ ಯಾದವ್ ಮತ್ತು ಪ್ರಿನ್ಸ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ರವಿ ಬಿಷ್ಣೋಯಿ ಹಾಗೂ ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.

ವೈಭವ್‌ ದಾಖಲೆ: ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಚೊಚ್ಚಲ ಹಾಗೂ ಸ್ಫೋಟಕ ಅರ್ಧಶತಕ ಬಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅರ್ಧಶತಕ ಗಳಿಸಿದ ಜಗತ್ತಿನ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ವೈಭವ್ ಪಾತ್ರರಾಗಿದ್ದಾರೆ.