SK Home Ad
Home ಸುದ್ದಿ ರಾಜ್ಯ ಮನೆಯನ್ನು ನಂದಗೋಕುಲ ಮಾಡಿದ್ದ ಚೆನ್ನಮ್ಮ

ಮನೆಯನ್ನು ನಂದಗೋಕುಲ ಮಾಡಿದ್ದ ಚೆನ್ನಮ್ಮ

0
67

ಬೆಂಗಳೂರು: ರಾಜಕೀಯ ಹಿನ್ನೆಲೆಯೇ ಇಲ್ಲದ ನಮ್ಮ ಕುಟುಂಬದ ಸೊಸೆಯಾಗಿ ಬಂದ ಚೆನ್ನಮ್ಮನವರು; ದೈವಭಕ್ತಿ, ಸಾತ್ವಿಕತೆ ಮತ್ತು ಸಾಂಪ್ರದಾಯಿಕ ನಡವಳಿಕೆಯ ಮೂಲಕ ನಮ್ಮ ಮನೆಯನ್ನು ನಂದಗೋಕುಲ ಮಾಡಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ಭಾವನಾತ್ಮಕವಾಗಿ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಹಿರಿಯರ ಆಣತಿಯಂತೆ ಪತಿ-ಪತ್ನಿಯರಾಗಿ ಸಪ್ತಪದಿ ತುಳಿದು ಬಾಳಬಂಡಿ ಏರಿದ್ದ ನಾವಿಬ್ಬರು ಸುಖ-ದುಃಖದಲ್ಲಿ ಸಮಭಾಗಿಗಳಾಗಿ ಸಪ್ತದಶಕಗಳ ಕಾಲ ಜೀವನ್ಮುಖಿಗಳಾಗಿ ತುಂಬು ಜೀವನ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಶಾಸಕನಾಗಿ, ಪ್ರತಿಪಕ್ಷ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಕೊನೆಗೆ ಪ್ರಧಾನ ಮಂತ್ರಿಯಾಗಿ ರಾಷ್ಟ್ರಸೇವೆ ಮಾಡುವ ಮಹಾಭಾಗ್ಯ ಸಿಕ್ಕಿತು. ಕೀರ್ತಿ ಪ್ರಖ್ಯಾತಿ ಎಲ್ಲವೂ ನನಗಷ್ಟೇ ಸೇರಿತು. ಅದರ ಹಿಂದಿನ ಚೈತನ್ಯಶಕ್ತಿ ಚೆನ್ನಮ್ಮನವರೇ ಆಗಿದ್ದರು ಎಂದರೆ ಉಪೇಕ್ಷೆ ಅಲ್ಲ ಎಂದು ದೇವೇಗೌಡರು ಬರೆದಿದ್ದಾರೆ.

ಗಂಧದ ಕೊರಡು ತನ್ನನ್ನು ತಾನು ತೇಯ್ದುಕೊಂಡು ಪರಿಮಳ ಹೊರಸೂಸುವಂತೆ ಚೆನ್ನಮ್ಮನವರ ಎಣೆಯಿಲ್ಲದ ಮಮತೆ ಮತ್ತು ತ್ಯಾಗಶೀಲತೆ ನನ್ನ ಬಾಳಿಗೆ ಪರಿಪೂರ್ಣತೆ ತುಂಬಿತು ಎಂದಿದ್ದಾರೆ.

ನಿತ್ಯ ದಾಸೋಹಿಯಾಗಿ ಮನೆಯ ಅನ್ನಪೂರ್ಣೆಯಾದರು. ಮಾನವೀಯ ಮೌಲ್ಯಗಳ ಅನುಸರಣೆ ಹಾಗೂ ಶುದ್ಧ ಅಂತಃಕರಣದ ಮಾತೃಪ್ರೇಮದ ಮೂಲಕ ಎಲ್ಲರ ಪಾಲಿನ ಅಮ್ಮನಾದರು ಎಂದು ಪತ್ರದಲ್ಲಿ ದೇವೇಗೌಡರು ಚೆನ್ನಮ್ಮನವರ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.