SK Home Ad
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಮಂಗಳೂರು ಪಾಲಿಕೆ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ

ಮಂಗಳೂರು ಪಾಲಿಕೆ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ

0
99

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಅವರಿಗೆ ವರ್ಗಾವಣೆಯಾಗಿದ್ದು, 2018ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ಸರಕಾರ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದೆ.

ರಾಹುಲ್ ರತ್ನಂ ಪಾಂಡೆ ಬೆಂಗಳೂರಿನ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ರಾಹುಲ್ ರತ್ನಂ ಪಾಂಡೆ ಮೂಲತಃ ಉತ್ತರ ಪ್ರದೇಶದವರು ಪಾಲಿಕೆ ಆಯುಕ್ತರಾಗಿದ್ದ ಕೆ.ಎ.ಎಸ್ ಅಧಿಕಾರಿ ರವಿಚಂದ್ರ ನಾಯಕ್ ಅವರ ವರ್ಗಾವಣೆಯಿಂದ ತೆರವಾದ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಲಾಗಿದೆ.