SK Home Ad
Home ಸುದ್ದಿ ದೇಶ ನೀಟ್ ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನೀಟ್ ಅಕ್ರಮ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

0
779

ನವದೆಹಲಿ: ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೀಟ್ ಅಕ್ರಮದ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಆರಂಭವಾಗಿದ್ದ ಹೋರಾಟದಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯೇ ಪ್ರಮುಖ ಬೇಡಿಕೆಯಾಗಿತ್ತು. ಸಚಿವರು ರಾಜೀನಾಮೆ ನೀಡುವವರೆಗೆ ಯಾವುದೇ ರೀತಿಯ ಮಾತುಕತೆಗೆ ಸಿದ್ಧರಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿತ್ತು.

ಇದೇ ವೇಳೆ, ವಿವಿಧ ವಿಪಕ್ಷಗಳೂ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದವು. ವಿದ್ಯಾರ್ಥಿಗಳ ಪ್ರತಿಭಟನೆ, ಸಾರ್ವಜನಿಕ ಒತ್ತಡ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸಚಿವರು ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.