SK Home Ad
Home ಕ್ರೀಡೆ IND vs ZIM: ಟಾಸ್‌ ಗೆದ್ದ ಜಿಂಬಾಬ್ವೆ, ಭಾರತಕ್ಕೆ ಮೊದಲು ಬ್ಯಾಟಿಂಗ್‌

IND vs ZIM: ಟಾಸ್‌ ಗೆದ್ದ ಜಿಂಬಾಬ್ವೆ, ಭಾರತಕ್ಕೆ ಮೊದಲು ಬ್ಯಾಟಿಂಗ್‌

0
163

ಹರಾರೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಜಿಂಬಾಬ್ವೆ ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಇಲ್ಲಿನ ಹರಾರೆ ಸ್ಫೋರ್ಟ್ಸ್‌ ಕ್ಲಬ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ನಾಯಕ ಸಿಕಂದರ್‌ ರಾಝಾ ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದು, ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಜಿಂಬಾಬ್ವೆ, ಈ ಪಂದ್ಯದಲ್ಲಿ ಆರಂಭದಲ್ಲೇ ಭಾರತೀಯ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಿ ಕಡಿಮೆ ಮೊತ್ತಕ್ಕೆ ನಿಯಂತ್ರಿಸುವ ತಂತ್ರ ರೂಪಿಸಿದೆ.

ಇನ್ನೊಂದೆಡೆ, ಭಾರತ ತಂಡ ದೊಡ್ಡ ಮೊತ್ತ ಕಲೆಹಾಕಿ ಸರಣಿಯಲ್ಲಿ ಮೇಲುಗೈ ಸಾಧಿಸುವ ಗುರಿಯೊಂದಿಗೆ ಕಣಕ್ಕಿಳಿದಿದೆ. ಎರಡೂ ತಂಡಗಳ ನಡುವಿನ ಈ ಹಣಾಹಣಿ ಕುತೂಹಲ ಕೆರಳಿಸಿದ್ದು, ಹರಾರೆ ಮೈದಾನದಲ್ಲಿ ಅಭಿಮಾನಿಗಳ ಗಮನ ಸೆಳೆದಿದೆ.