SK Home Ad
Home ಸುದ್ದಿ ದೇಶ ಶಿಕ್ಷಣ ಸಚಿವರಾಗಿ ಪ್ರಲ್ಹಾದ್‌ ಜೋಶಿಗೆ ಹೆಚ್ಚುವರಿ ಹೊಣೆ

ಶಿಕ್ಷಣ ಸಚಿವರಾಗಿ ಪ್ರಲ್ಹಾದ್‌ ಜೋಶಿಗೆ ಹೆಚ್ಚುವರಿ ಹೊಣೆ

0
393

ನವದೆಹಲಿ: ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಕೇಂದ್ರ ಸರ್ಕಾರವು ಬಿಜೆಪಿ ಹಿರಿಯ ನಾಯಕ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್‌ ಜೋಶಿ ಅವರಿಗೆ ಕೇಂದ್ರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ನೀಟ್‌-ಯುಜಿ ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ತೀವ್ರಗೊಂಡಿದ್ದವು. ಈ ಬೆಳವಣಿಗೆಯ ನಡುವೆ ಧರ್ಮೇಂದ್ರ ಪ್ರಧಾನ್‌ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಪ್ರಸ್ತುತ ಪ್ರಲ್ಹಾದ್‌ ಜೋಶಿ ಅವರು ಹೊಸ ಮತ್ತು ನವೀಕರಿಸಬಹುದಾದ ಇಂಧನ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆಗಳ ಜವಾಬ್ದಾರಿಯನ್ನೂ ಹೊಂದಿದ್ದಾರೆ. ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಅವರು, ಈ ಹಿಂದೆ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.