SK Home Ad
Home ನಮ್ಮ ಜಿಲ್ಲೆ ಚಿತ್ರದುರ್ಗ ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ!

ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ!

0
139

ಹಿರಿಯೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಹೊರ ವಲಯದಲ್ಲಿರುವ ಹಾಸ್ಟೆಲ್‌ನಲ್ಲಿದ್ದುಕೊಂಡು ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿಗೆ(ವಯಸ್ಸು 17 ವರ್ಷ 5 ತಿಂಗಳು) ಕಳೆದ ಒಂದು ವರ್ಷದ ಹಿಂದೆ ತಾಲೂಕಿನ ಹಾಲ ಮಾದೇನಹಳ್ಳಿ ಗೂಡ್ಸ ಗಾಡಿ ಡ್ರೈವರ್ ಕರಿಯಣ್ಣ (22) ಎಂಬ ಯುವಕನ ಪರಿಚಯವಾಗಿದೆ. ಈ ಪರಿಚಯ ಸ್ನೇಹ, ಪ್ರೀತಿ, ಪ್ರಣಯಕ್ಕೆ ತಿರುಗಿ ಅಪ್ರಾಪ್ತ ಬಾಲಕಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಕುರಿತು ವಿದ್ಯಾರ್ಥಿನಿಯರ ಕಾಲೇಜು ಹಾಸ್ಟೆಲ್‌ ವಾರ್ಡನ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕರಿಯಣ್ಣನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದಾನೆ.

ಪ್ರಕರಣ ನಗರ ಠಾಣೆಯಿಂದ ತಾಲೂಕಿನ ಅಬ್ಬಿನನೊಳೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ. ಬಾಲಕಿಯ ತಂದೆ, ತಾಯಿ ಬೆಂಗಳೂರಿನಲ್ಲಿ ವಾಸವಾಗಿದ್ದು ಎಸ್ಎಸ್ಎಲ್‌ಸಿ ನಂತರದ ಕಾಲೇಜು ವ್ಯಾಸಂಗಕ್ಕಾಗಿ ಮಗಳನ್ನು ಬಾಲಕಿಯ ತಾಯಿ ತವರುಮನೆ ಸೂಗೂರು ಗ್ರಾಮದಲ್ಲಿ ಅಜ್ಜಿ ಬಳಿ ಬಿಟ್ಟಿದ್ದರು.