ನೆಟ್ಟಾರು ಕೊಲೆ ಆರೋಪಿಗೆ ಎಸ್‌ಡಿಪಿಐ ಟಿಕೆಟ್..?

0
22
ಶಾಫಿ ಬೆಳ್ಳಾರೆ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಗೆ ಎಸ್‌ಡಿಪಿಐ ಟಿಕೆಟ್ ಘೋಷಣೆ ಮಾಡಿದೆ ಎನ್ನಲಾಗುತ್ತಿದ್ದು, ಎಸ್‌ಡಿಪಿಐಯ ಈ ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.
ಶಾಫಿ ಬೆಳ್ಳಾರೆ ಎಸ್‌ಡಿಪಿಐನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಶಾಫಿ ಬೆಳ್ಳಾರೆಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಜೈಲಿನಿಂದಲೇ ಶಾಫಿ ಬೆಳ್ಳಾರೆ ಸ್ಪರ್ಧೆ ಮಾಡಲಿದ್ದಾನೆ ಎನ್ನಲಾಗುತ್ತಿದೆ. ಪ್ರವೀಣ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ವಿರುದ್ಧ ನೇರ ಆರೋಪಗಳಿವೆ. ತನಿಖೆ ವೇಳೆ ಸಿಕ್ಕಿರುವ ಸೂಕ್ತ ಸಾಕ್ಷ್ಯಾಧಾರಗಳನ್ನು ಆಧಾರವಾಗಿರಿಸಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Previous article‘ಜೈಲರ್’ಗಾಗಿ ಮಂಗಳೂರಿಗೆ ಆಗಮಿಸಿದ ರಜನಿಕಾಂತ್
Next articleಕೊಲೆ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರಿ: ಪ್ರವೀಣ್ ನೆಟ್ಟಾರು ಹೆತ್ತವರ ಆಗ್ರಹ