SK Home Ad
Home ನಮ್ಮ ಜಿಲ್ಲೆ ಗದಗ ಮಾನಸಿಕ ಅಸ್ವಸ್ಥೆ ಅತ್ಯಾಚಾರ: ಏಳು ಜನರ ಬಂಧನ

ಮಾನಸಿಕ ಅಸ್ವಸ್ಥೆ ಅತ್ಯಾಚಾರ: ಏಳು ಜನರ ಬಂಧನ

0
51

ಗದಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ನಾಲ್ವರು ದುರುಳರು ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆಯೊಂದು ಗದುಗಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಎಸಗಿದ ಮತ್ತು ಅಕ್ರಮವಾಗಿ ಗರ್ಭಪಾತ ಮಾಡಿಸಿದ ಆರ್‌ಎಂಪಿ ವೈದ್ಯ ಹಾಗೂ ಸ್ಟಾಫ್ ನರ್ಸ್ ಸೇರಿದಂತೆ ಒಟ್ಟು ಏಳು ಜನರನ್ನು ಗದಗ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಗದಗ ಬೆಟಗೇರಿ ನಿವಾಸಿಗಳಾದ ಸಿಕಂದರ್ ಬೇಪಾರಿ, ಶಬ್ಬೀರಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಅತ್ಯಾಚಾರ ನಡೆಸಿದ ಆರೋಪಿಗಳು. ಯುವತಿ ಮೂರು ತಿಂಗಳ ಗರ್ಭಿಣಿಯಾದಾಗ ಈ ನೀಚ ಕೃತ್ಯ ಪೋಷಕರಿಗೆ ತಿಳಿದಿದೆ.

ಈ ವೇಳೆ ಆರೋಪಿಗಳು ಬಡ ಕುಟುಂಬಕ್ಕೆ ಹಣದ ಆಮಿಷವೊಡ್ಡಿ, ದೂರು ನೀಡದಂತೆ ಜೀವಬೆದರಿಕೆ ಹಾಕಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಆರ್‌ಎಂಪಿ ವೈದ್ಯ ಡಾ. ನಾಗರಾಜ್ ಕಮತರ, ಶಿಗ್ಲಿ ಸರ್ಕಾರಿ ಆಸ್ಪತ್ರೆ ಸ್ಟಾಫ್ ನರ್ಸ್ ರೇಖಾ ಶಿರಹಟ್ಟಿ ಹಾಗೂ ಸಂದೀಪ್ ಎಂಬುವವರ ನೆರವಿನಿಂದ 10 ಗರ್ಭಪಾತ ಮಾತ್ರೆ ನೀಡಿ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ದೂರು ದಾಖಲಾಗಿದೆ.