ನರಭಕ್ಷಕ ಹುಲಿ ಸೆರೆ

0
41
ಹುಲಿ

ಮಡಿಕೇರಿ: ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯಲ್ಲಿ ಒಂದೇ ಮನೆಯ ಇಬ್ಬರ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಹುಲಿಯನ್ನು ಸೆರೆ ಹಿಡಿಯಲು ಬೆಳಗ್ಗೆಯಿಂದಲೇ 5 ಸಾಕಾನೆಗಳ ಸಹಕಾರದೊಂದಿಗೆ 150ಕ್ಕೂ ಅಧಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗಿರಲಿಲ್ಲ. ಮಧ್ಯಾಹ್ನದ ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗೆ ಆಪರೇಷನ್ ಟೈಗರ್ ಆರಂಭಿಸಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Previous articleಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಪ್ರಭಾಕರ್ ಚಿಣಿ
Next articleಬಲೆಗೆ ಬಿದ್ದ ‘ಕಟ್ಟೆ ಕೊಂಬು’ ಮೀನು