SK Home Ad
Home ನಮ್ಮ ಜಿಲ್ಲೆ ಉಡುಪಿ ಉಡುಪಿ ಶೂಟೌಟ್: ತಪ್ಪಿಸಲೆತ್ನಿಸಿದ ಇನ್ನೋರ್ವ ಆರೋಪಿಗೆ ಗುಂಡೇಟು

ಉಡುಪಿ ಶೂಟೌಟ್: ತಪ್ಪಿಸಲೆತ್ನಿಸಿದ ಇನ್ನೋರ್ವ ಆರೋಪಿಗೆ ಗುಂಡೇಟು

0
74
ಉಡುಪಿಯಲ್ಲಿ ಪೊಲೀಸ್ ಕಾರ್ಯಾಚರಣೆ: ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಪೊಲೀಸರಿಂದ ಫೈರಿಂಗ್

ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆ, ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಶೂಟೌಟ್

ಸಂ.ಕ. ಸಮಾಚಾರ, ಉಡುಪಿ : ಮುದರಂಗಡಿಯ ಗುತ್ತಿಗೆದಾರ, ಉದ್ಯಮಿ ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ, ಪಿಎಸ್ಐಯಿಂದ ಪಿಸ್ತೂಲ್ ಕಸಿದು ಗುಂಡು ಹಾರಿಸಿದ ಆರೋಪಿಗೆ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮುಂಬೈ ಮೂಲದ ಕುಖ್ಯಾತ ಗ್ಯಾಂಗ್ ಸ್ಟರ್ ಅನೂಜ್ ಪಾಟೀಲ್ (35) ಗುಂಡೇಟಿಗೊಳಗಾದ ಆರೋಪಿಯಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಅಜ್ಜರಕಾಡು‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಆ. 7ರಂದು ಅಪರಾಹ್ನ 3.45ರ ಸುಮಾರಿಗೆ ಕಾಪು ತಾಲೂಕಿನ ಮುದರಂಗಡಿ ಸೈಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್ ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿ’ಸೋಜಾನನ್ನು ಮೋಟಾರ್ ಸೈಕಲ್ ನಲ್ಲಿ ಬಂದಿದ್ದ ದುಷ್ಕರ್ಮಿಗಳ ಪೈಕಿ ಸಹಸವಾರ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು.

ಪ್ರಕರಣದ ತನಿಖೆಯ ಭಾಗವಾಗಿ ಕುಂದಾಪುರ ಪೊಲೀಸ್ ಠಾಣೆಯ ಪಿಎಸ್ಐ ನಂಜಾ ನಾಯಕ್, ಕೊಲ್ಲೂರು ಠಾಣೆಯ ಪಿಎಸ್ಐ ವಿನಯ್ ಹಾಗೂ ಸಿಬ್ಬಂದಿ ತಂಡ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶೂಟರ್ ಗಳನ್ನು ಕಳುಹಿಸಿದ ಆರೋಪದ ಮೇಲೆ ಮುಂಬೈನ ಗ್ಯಾಂಗ್ ಸ್ಟರ್ ಅನೂಜ್ ಪಾಟೀಲ್ ನನ್ನು ಬೆಳಗ್ಗೆ 6ರಿಂದ 6.30ರ ನಡುವೆ ಬಂಧಿಸಿತ್ತು.

ಬಂಧಿಸಿ ಕರೆತರುತ್ತಿದ್ದ ವೇಳೆ ಅನೂಜ್ ಪಾಟೀಲ್ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಪಿಎಸ್ಐ ವಿನಯ್ ಅವರ ಪಿಸ್ತೂಲ್ ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಕುಂದಾಪುರ ಪಿಎಸ್ಐ ನಂಜಾ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗುಂಡೇಟಿನಿಂದ ಗಾಯಗೊಂಡ ಅನೂಜ್ ಪಾಟೀಲ್ ನನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅನೂಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಮೊಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆತನ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿವೆ.
ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತಿನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಡೇವಿಡ್ ಡಿ’ಸೋಜಾ ಕೊಲೆ ಪ್ರಕರಣದಲ್ಲಿ ಈಗಾಗಲೇ 10 ಮಂದಿಯನ್ನು ಬಂಧಿಸಲಾಗಿದ್ದು, ಇನ್ನಷ್ಟು ಮಂದಿಯ‌ ಕೃತ್ಯ ಹಾಗೂ ಕೃತ್ಯದ ಹಿಂದಿರುವ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.