SK Home Ad
Home ನಮ್ಮ ಜಿಲ್ಲೆ ಧಾರವಾಡ ಸಂಭ್ರಮಾಚರಣೆ, ಮೆರವಣಿಗೆ ಮಾಡದಿರಲು ವಿನಯ್‌ ಮನವಿ

ಸಂಭ್ರಮಾಚರಣೆ, ಮೆರವಣಿಗೆ ಮಾಡದಿರಲು ವಿನಯ್‌ ಮನವಿ

0
44

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದದ ಆರೋಪಿ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಿದ್ದರಿಂದ ಶಾಸಕ ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಯಾವುದೇ ಅಡತಡೆ ಇಲ್ಲದಂತಾಗಿದೆ.

ವಿನಯ್ ಕುಲಕರ್ಣಿ ಕುಟುಂಬದ ಸದಸ್ಯರು ನ್ಯಾಯಾಲಯದ ತೀರ್ಪಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳು ಕೂಡ ವಿನಯ್ ಕುಲಕರ್ಣಿ ಅವರು ತಮ್ಮ ಕ್ಷೇತ್ರಕ್ಕೆ ಬರುವುದನ್ನು ಕಾಯುತ್ತಿದ್ದಾರೆ. ಆದರೆ ಯಾವುದೇ ಸಂಭ್ರಮಾಚರಣೆ ಹಾಗೂ ಮೆರವಣಿಗೆ ಮಾಡದಂತೆ ನ್ಯಾಯಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡದಂತೆ ಶಾಸಕ ವಿನಯ ಕುಲಕರ್ಣಿ ಅಭಿಮಾನಿಗಳಲ್ಲಿ ಕೋರಿದ್ದಾರೆ.

ಕ್ಷೇತ್ರದ ಅಭಿವೃದ್ಧಿ ಪರ ಹಾಗೂ ಸಮಸ್ಯೆಗಳನ್ನು ಆಲಿಸಲು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಶಾಸಕ ವಿನಯ ಕುಲಕರ್ಣಿ ಮನವಿಯಲ್ಲಿ ತಿಳಿಸಿದ್ದಾರೆ. ಸಂವಿಧಾನಾತ್ಮಕ ವ್ಯವಸ್ಥೆ ಮತ್ತು ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ಗೌರವವಿದೆ. ಕಳೆದ ಕೆಲವು ವರ್ಷಗಳಿಂದ ನನ್ನ ಕ್ಷೇತ್ರದ ಜನತೆ ಹಾಗೂ ಆತ್ಮೀಯ ಅಭಿಮಾನಿಗಳು ಪಟ್ಟಿರುವ ಶ್ರಮ, ತೋರಿದ ನಂಬಿಕೆ ಮತ್ತು ನಿರಂತರ ಬೆಂಬಲಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ಆಶೀರ್ವಾದದಿಂದಲೇ ಇಂದು ನನ್ನ ಶಾಸಕ ಸ್ಥಾನವು ಮರುಸ್ಥಾಪನೆಯಾಗಿದ್ದು, ಕ್ಷೇತ್ರದ ಜನತೆಯ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.