SK Home Ad
Home ನಮ್ಮ ಜಿಲ್ಲೆ ದಾವಣಗೆರೆ ದಾವಣಗೆರೆ: ನೇಪಾಳ ಪ್ರವಾಹ ಸಂತ್ರಸ್ತರ ನೆರವಿಗೆ 24×7 ಸಹಾಯವಾಣಿ

ದಾವಣಗೆರೆ: ನೇಪಾಳ ಪ್ರವಾಹ ಸಂತ್ರಸ್ತರ ನೆರವಿಗೆ 24×7 ಸಹಾಯವಾಣಿ

0
67

ದಾವಣಗೆರೆ: ನೇಪಾಳದಲ್ಲಿ ಸಂಭವಿಸಿರುವ ಭಾರೀ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹದಿಂದಾಗಿ ದಾವಣಗೆರೆ ಜಿಲ್ಲೆಯ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ಸಿಲುಕಿಕೊಂಡಿದ್ದರೆ, ನಾಪತ್ತೆಯಾಗಿದ್ದರೆ ಅವರ ಮಾಹಿತಿಯನ್ನು ತಕ್ಷಣ ಜಿಲ್ಲಾಡಳಿತಕ್ಕೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.

ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನೇಪಾಳದಲ್ಲಿ ನಾಪತ್ತೆಯಾಗಿರುವ ಬಗ್ಗೆ ಶಂಕೆ ಇದ್ದಲ್ಲಿ, ಅವರ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಹಾಗೂ ಸಮಯ ಮತ್ತು ಖಾಯಂ ವಿಳಾಸದ ವಿವರಗಳನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಮಾಹಿತಿ ನೀಡಲು ಹಾಗೂ ತುರ್ತು ನೆರವು ಪಡೆಯಲು ದಾವಣಗೆರೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 24×7 ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ (DEOC) ಟೋಲ್ ಫ್ರೀ ಸಂಖ್ಯೆ 1077ಕ್ಕೆ ಕರೆ ಮಾಡಬಹುದು. ಅಲ್ಲದೆ 7259700555, 9480803201 ಹಾಗೂ 9060798768 ಮೊಬೈಲ್ ಸಂಖ್ಯೆಗಳಿಗೂ ಸಂಪರ್ಕಿಸಬಹುದು.

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಂಖ್ಯೆಗಳಿಗೆ +977 9851316807, +977 9709107500 ಹಾಗೂ +977 9810326117 ಕರೆ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಬಹುದಾಗಿದೆ.

ಅಲ್ಲದೆ, ನಾಪತ್ತೆಯಾದವರು ಅಥವಾ ಸಂಕಷ್ಟದಲ್ಲಿರುವವರ ವಿವರಗಳನ್ನು ರಾಜ್ಯ ಸರ್ಕಾರದ ಗೂಗಲ್ ಫಾರ್ಮ್ ಮೂಲಕವೂ ಸಲ್ಲಿಸಬಹುದಾಗಿದೆ. ಸಂತ್ರಸ್ತರು ಹಾಗೂ ಅವರ ಸಂಬಂಧಿಕರು ಯಾವುದೇ ವಿಳಂಬ ಮಾಡದೆ ಲಭ್ಯವಿರುವ ಸಹಾಯವಾಣಿ ಸಂಖ್ಯೆಗಳ ಮೂಲಕ ಮಾಹಿತಿ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.