ಧಾರವಾಡ: ನೇಪಾಳದಲ್ಲಿ ಆ. 26ರಂದು ಸಂಭವಿಸಿದ ಪ್ರಕೃತಿ ವಿಕೋಪ ದಿಢೀರ್ ಪ್ರವಾಹ ದುರಂತದಲ್ಲಿ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು, ನೂರಾರು ಜನ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಕ್ರಮಕೈಗೊಳ್ಳಲಾಗುತ್ತಿದೆ.
ಅದರಂತೆ, ಧಾರವಾಡ ಜಿಲ್ಲೆಯ ಮೂಲದ ನಾಗರಿಕರು ಅಥವಾ ಪ್ರವಾಸಿಗರು ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ ತಕ್ಷಣವೇ ಅವರ ವಿವರಗಳನ್ನು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಡಳಿತವು ತಿಳಿಸಿದೆ.
ಸಹಾಯವಾಣಿ ವಿವರ: ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರ ಸಂಖ್ಯೆ: 08536-2445508 ಅಥವಾ (1077 -ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 080-22253707 ಅಥವಾ 1070 (ಟೋಲ್ ಫ್ರೀ) ಸಂಪರ್ಕಿಸಿ.
ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆ +977 9851316807, +977 9709107500 ಅಥವಾ +977 9810326117 ಹಾಗೂ ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B) ಲಿಂಕ್‍ನಲ್ಲಿ ಭರ್ತಿ ಮಾಡಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.






















