SK Home Ad
Home ನಮ್ಮ ಜಿಲ್ಲೆ ದಾವಣಗೆರೆ ಪೆಟ್ರೋಲ್ ಹಾಕಿಸುವಾಗಲೇ ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಪೆಟ್ರೋಲ್ ಹಾಕಿಸುವಾಗಲೇ ಏಕಾಏಕಿ ಕುಸಿದು ಬಿದ್ದು ವ್ಯಕ್ತಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

0
97

ದಾವಣಗೆರೆ: ಬೈಕ್‌ಗೆ ಪೆಟ್ರೋಲ್ ಹಾಕಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಗರದ ಎಸ್.ಪಿ.ಎಸ್. ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ಮೃತರನ್ನು ಮೆಹಬೂಬ್ ನಗರದ ನಿವಾಸಿ ಮುನ್ನಾ (ಹೆಸರು) ಎಂದು ಗುರುತಿಸಲಾಗಿದೆ. ಅವರು ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಲಾರಿ ಓಡಿಸಿದ್ದ ಪೇಮೆಂಟ್ ಪಡೆದು ಹಣವನ್ನು ಪಡೆದುಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಪೆಟ್ರೋಲ್ ಬಂಕ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕಿಸುತ್ತಿದ್ದ ಸಂದರ್ಭದಲ್ಲಿ ಮುನ್ನಾ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕುಸಿದು ಬಿದ್ದ ಮುನ್ನಾ ಅವರಿಗೆ ಸ್ಥಳೀಯರು ತಕ್ಷಣ ನೆರವು ನೀಡಲು ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮುನ್ನಾ ಅವರಿಗೆ ಈ ಹಿಂದೆ ಹೃದಯಾಘಾತವಾಗಿದ್ದು, ಸ್ಟೆಂಟ್ ಅಳವಡಿಸಲಾಗಿತ್ತು ಎಂದು ತಿಳಿದುಬಂದಿದೆ. ಇದೀಗ ಎರಡನೇ ಬಾರಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.