ಸವಣಾಲು ಗ್ರಾಮದಲ್ಲಿ ಮತ್ತೊಂದು ಚಿರತೆ ಸೆರೆ – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ : ಮನೆಯ ಅಂಗಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಪ್ರದೇಶದಲ್ಲಿ ಸೆಪ್ಟೆಂಬರ್ 1ರ ಬೆಳಗ್ಗೆ ನಡೆದಿದೆ. ಹನ್ಯಾಡಿ ಪಲ್ಕೆ ನಿವಾಸಿ ಬಾಲಕೃಷ್ಣ ನಾಯ್ಕ ಅವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯಲು ಬೋನು ಇರಿಸಿದ್ದರು. ಬೆಳಗ್ಗೆ ಪರಿಶೀಲನೆ ನಡೆಸಿದಾಗ ಚಿರತೆ ಬೋನಿಗೆ ಸೆರೆಯಾಗಿರುವುದು ಕಂಡುಬಂದಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ದಾಂಡೇಲಿ ನಗರಸಭೆ ಆಡಳಿತಕ್ಕೆ ‘ಸರ್ಜರಿ’ ಅಗತ್ಯ? : ಜನಸಾಮಾನ್ಯರ ಸಣ್ಣಪುಟ್ಟ ಕೆಲಸಗಳಿಗೂ ವಿಳಂಬ, ಸಿಬ್ಬಂದಿ ಕೊರತೆ ಹಾಗೂ ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯದ ಆರೋಪಗಳ ನಡುವೆ ದಾಂಡೇಲಿ ನಗರಸಭೆಯ ಆಡಳಿತ ವ್ಯವಸ್ಥೆ ಸುಧಾರಣೆಯ ಅಗತ್ಯ ಎದುರಿಸುತ್ತಿದೆ. ಇದರ ನಡುವೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಯಲ್ಲಿ ನಕಲಿ ಹಕ್ಕುಪತ್ರ, ಅಧಿಕಾರಿಗಳ ಸಹಿ ನಕಲು ಹಾಗೂ ಅರ್ಹರಲ್ಲದವರಿಗೆ ನಿವೇಶನ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಲೋಕಾಯುಕ್ತ ಪರಿಶೀಲನೆಯಲ್ಲಿ ಹೆಚ್ಚು ಅನುಮಾನಾಸ್ಪದ ಹಕ್ಕುಪತ್ರಗಳು ಪತ್ತೆಯಾಗಿವೆ ಎನ್ನಲಾಗಿದ್ದು, ಈ ಕುರಿತು ಸಮಗ್ರ ದಾಖಲೆ ಆಧಾರಿತ ತನಿಖೆಗೆ ಆಗ್ರಹಿಸಲಾಗಿದೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಭದ್ರಾ ಮೇಲ್ದಂಡೆ ಯೋಜನೆಗೆ ನೀರು – ದಾವಣಗೆರೆ ಬಂದ್‌ಗೆ ಸಹಕರಿಸಲು ಬಿಜೆಪಿ ಮನವಿ : ಭದ್ರಾ ಮೇಲ್ದಂಡೆ ಯೋಜನೆಗೆ ಭದ್ರಾ ಜಲಾಶಯದಿಂದ ಮೂರು ಟಿಎಂಸಿ ಅಡಿ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕರೆ ನೀಡಿದ್ದ ದಾವಣಗೆರೆ ಬಂದ್‌ಗೆ ಸಹಕರಿಸುವಂತೆ ಬಿಜೆಪಿ ಮುಖಂಡರು ನಗರದ ವ್ಯಾಪಾರಸ್ಥರು, ಅಂಗಡಿ ಮಾಲೀಕರು, ಆಟೋ ಚಾಲಕರು ಹಾಗೂ ಬಸ್ ಮಾಲೀಕರಿಗೆ ಮನವಿ ಮಾಡಿದರು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಅಣ್ಣಾ ಹಜಾರೆ ಆರೋಗ್ಯದಲ್ಲಿ ಏರುಪೇರು – ಮುಂಬೈ ಆಸ್ಪತ್ರೆಗೆ ದಾಖಲು : ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಮುಂಬೈನ ಬಾಂಬೆ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ. ಮಹಾರಾಷ್ಟ್ರದ ರಾಲೇಗಣ ಸಿದ್ಧಿ ಗ್ರಾಮದ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣಾ ಹಜಾರೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ. ಅವರನ್ನು ಕಾರ್ಡಿಯಾಕ್ ಆಂಬ್ಯುಲೆನ್ಸ್ ಮೂಲಕ ಮುಂಬೈನ ಬಾಂಬೆ ಆಸ್ಪತ್ರೆಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು; ಧಾರವಾಡದಲ್ಲಿ ಮೂವರ ದಾರುಣ ಸಾವು : ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಘಟನೆ ಕುರಿತು ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ದಾವಣಗೆರೆ ಬಂದ್ – ಬಸ್, ಆಟೋ ಸಂಚಾರ ವಿರಳ : ಭದ್ರಾ ಜಲಾಶಯದಿಂದ ಭದ್ರಾ ಮೇಲ್ದಂಡೆ ಯೋಜನೆಗೆ ಮೂರು ಟಿಎಂಸಿ ಅಡಿ ನೀರು ಹರಿಸುವುದು ಹಾಗೂ ಗುಟ್ಕಾ ನಿಷೇಧವನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಕರೆ ನೀಡಿದ್ದ ದಾವಣಗೆರೆ ಬಂದ್‌ಗೆ ಮಂಗಳವಾರ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲಾ-ಕಾಲೇಜುಗಳು ರಜೆ ಘೋಷಿಸಿದ್ದರಿಂದ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳ ಸಂಚಾರ ಕಡಿಮೆಯಾಗಿತ್ತು. ನಗರ ಸಾರಿಗೆ ಬಸ್‌ಗಳು ಹಾಗೂ ಆಟೋಗಳ ಸಂಚಾರವೂ ವಿರಳವಾಗಿತ್ತು. ಪೂರ್ಣ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
‘ಬಳ್ಳಾರಿ ಚಲೋ’ ಪಾದಯಾತ್ರೆ ಶುರು! : ಬಿಜೆಪಿ ‘ಬಳ್ಳಾರಿ ಚಲೋ’ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಪಾದಯಾತ್ರೆ ಆರಂಭವಾಗಿ, 10 ದಿನಗಳ ಕಾಲ ಸುಮಾರು 170 ಕಿಲೋಮೀಟರ್ ದೂರ ಸಾಗಲಿದೆ. ಈ ಯಾತ್ರೆಯು ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಎಂಟು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಲಿದೆ. ಲಿಂಗಸುಗೂರು, ಮಸ್ಕಿ, ಸಿಂಧನೂರು (ರಾಯಚೂರು), ಕಾರಟಗಿ, ಗಂಗಾವತಿ (ಕೊಪ್ಪಳ), ಕಂಪ್ಲಿ ಮತ್ತು ಸಂಡೂರು (ಬಳ್ಳಾರಿ) ಕ್ಷೇತ್ರಗಳಲ್ಲಿ ಪಾದಯಾತ್ರೆ ಸಾಗಿ, ನಂತರ ಬಳ್ಳಾರಿಯಲ್ಲಿ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ. ಬಿ.ನಾಗೇಂದ್ರ ರಾಜೀನಾಮೆ ನಂತರವು ಪಾದಯಾತ್ರೆ ನಡೆಸುವ ನಿರ್ಧಾರದ ಹಿಂದೆ ಸರಿಯದ ಬಿಜೆಪಿಯು ಸರ್ಕಾರದ ವೈಫಲ್ಯ, ದುರಾಡಳಿತ ಹಾಗೂ ದಲಿತ ವಿರೋಧಿ ಧೋರಣೆ ವಿರುದ್ಧ ಜನಾಂದೋಲನ ರೂಪಿಸುವ ಸಲುವಾಗಿ ಪಾದಯಾತ್ರೆ ಮಾಡಿಯೇ ತೀರುವುದಾಗಿ ಹೋರಾಟಕ್ಕೆ ಮುಂದಾಗಿದೆ.
ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.





















