SK Home Ad
Home ನಮ್ಮ ಜಿಲ್ಲೆ ಗದಗ ಗದಗಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಗಣ್ಯರಿಂದ ಸ್ವಾಗತ

ಗದಗಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಗಣ್ಯರಿಂದ ಸ್ವಾಗತ

0
104
File Photo

ಗದಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲೆಗೆ ಆಗಮಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಬಂದಿಳಿದ ಮುಖ್ಯಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಗಣ್ಯರು ಸ್ವಾಗತಿಸಿದರು.

ಶಾಸಕರಾದ ಡಾ. ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ಬಿ.ಆರ್. ಯಾವಗಲ್, ರಾಮಣ್ಣ ಲಮಾಣಿ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಹೆಲಿಪ್ಯಾಡ್‌ನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಜಾನಕಿ ಎಸ್., ಐಜಿಪಿ ಸಂದೀಪ್ ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿತುನ್ ಎಚ್.ಎನ್., ಡಿಸಿಎಫ್ ಸಂತೋಷ ಕುಮಾರ್ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಿಗದಿತ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ.

ಪ್ರತಿ ಹೊಸ ಅಪ್‌ಡೇಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿರಿ 👉 ಇಂದಿನ ಪ್ರಮುಖ ಲೈವ್ ಅಪ್‌ಡೇಟ್‌ಗಳನ್ನು ‘ಸಂಯುಕ್ತ ಕರ್ನಾಟಕ’ ಜಾಲತಾಣದಲ್ಲಿ ನಿರಂತರವಾಗಿ ಓದಿರಿ.