SK Home Ad
Home ಸುದ್ದಿ ರಾಜ್ಯ ಗೃಹಲಕ್ಷ್ಮಿಯರಿಗೆ ಸರ್ಕಾರದಿಂದ ಬಿಗ್ ನ್ಯೂಸ್: ಮನೆ-ಮನೆ ಸರ್ವೆ ನಡುವೆಯೂ ಯಾವಾಗ ಬರಲಿದೆ 33ನೇ ಕಂತಿನ ಹಣ?...

ಗೃಹಲಕ್ಷ್ಮಿಯರಿಗೆ ಸರ್ಕಾರದಿಂದ ಬಿಗ್ ನ್ಯೂಸ್: ಮನೆ-ಮನೆ ಸರ್ವೆ ನಡುವೆಯೂ ಯಾವಾಗ ಬರಲಿದೆ 33ನೇ ಕಂತಿನ ಹಣ? ಇಲ್ಲಿದೆ ಮಾಹಿತಿ

0
37

ಗೃಹಲಕ್ಷ್ಮಿ: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ ಅಡಿಯಲ್ಲಿ ಮಾಸಿಕ ಧನಸಹಾಯ ಪಡೆಯುತ್ತಿರುವ ಮಹಿಳೆಯರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಯೋಜನೆಯಲ್ಲಿ ಅನರ್ಹರನ್ನು ಪತ್ತೆಹಚ್ಚಲು ಮನೆ-ಮನೆ ಸಮೀಕ್ಷೆ ಕಾರ್ಯ ನಡೆಯುತ್ತಿದ್ದರೂ, ಅರ್ಹ ಫಲಾನುಭವಿಗಳಿಗೆ ಬರಬೇಕಾದ 33ನೇ ಕಂತಿನ ಹಣದ ವಿತರಣೆಯಲ್ಲಿ ಯಾವುದೇ ಅಡೆತಡೆ ಉಂಟಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ಅನರ್ಹರು ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಸಮಗ್ರ ಪರಿಷ್ಕರಣೆಗೆ ಮುಂದಾಗಿತ್ತು. ಈ ಪ್ರಕ್ರಿಯೆ ನಡೆಯುವ ಸಮಯದಲ್ಲಿ ಹಣ ಬಿಡುಗಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಆಲೋಚನೆ ಮೊದಲಿತ್ತಾದರೂ, ಇದರಿಂದ ಅರ್ಹ ಬಡ ಮಹಿಳೆಯರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿಗಳು ಹಣ ಬಿಡುಗಡೆಗೆ ಸೂಚನೆ ನೀಡಿದ್ದಾರೆ.

ನಿನ್ನೆ ನಡೆದ ಗ್ಯಾರಂಟಿ ಪ್ರಾಧಿಕಾರದ ಪ್ರಮುಖ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದೇ ತಿಂಗಳಲ್ಲಿ 33ನೇ ಕಂತಿನ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ. ಇದೇ ವೇಳೆ, ಇಂದಿನಿಂದಲೇ ಅಧಿಕಾರಿಗಳ ತಂಡ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಆರಂಭಿಸಲಿದೆ. ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡುವುದು ಈ ಸರ್ವೆಯ ಮುಖ್ಯ ಉದ್ದೇಶವಾಗಿದೆ. ಅರ್ಹರಿಗೆ ಯಾವುದೇ ಆತಂಕ ಬೇಡ ಎಂದು ಸರ್ಕಾರ ಭರವಸೆ ನೀಡಿದೆ.