SK Home Ad
Home ಸಿನಿ ಮಿಲ್ಸ್ ದಿಶಾ ಸಾಲಿಯನ್ ಪ್ರಕರಣದಲ್ಲಿ ಹೊಸ ತಿರುವು: ಮುಂಬೈ ಪೊಲೀಸರ ತನಿಖೆಗೆ ಹೈಕೋರ್ಟ್ ತರಾಟೆ!

ದಿಶಾ ಸಾಲಿಯನ್ ಪ್ರಕರಣದಲ್ಲಿ ಹೊಸ ತಿರುವು: ಮುಂಬೈ ಪೊಲೀಸರ ತನಿಖೆಗೆ ಹೈಕೋರ್ಟ್ ತರಾಟೆ!

0
58

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ನಿಗೂಢ ಸಾವಿನ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ಒಪ್ಪಿಸಿ ಆದೇಶಿಸಿದೆ. ಮುಂಬೈ ಪೊಲೀಸರ ತನಿಖೆಯಲ್ಲಿ ಗಂಭೀರ ಲೋಪಗಳಾಗಿವೆ ಎಂದು ಆರೋಪಿಸಿ, ಮರುತನಿಖೆಗೆ ಒತ್ತಾಯಿಸಿ ದಿಶಾ ತಂದೆ ಸತೀಶ್ ಸಾಲಿಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಈ ನಿರ್ಧಾರ ಕೈಗೊಂಡಿದೆ.

ನಂತರ ಜೂನ್ 8, 2020 ರಂದು ಮುಂಬೈನ ಮಲಾಡ್‌ನಲ್ಲಿರುವ ಕಟ್ಟಡದ 14ನೇ ಮಹಡಿಯಿಂದ ಬಿದ್ದು ದಿಶಾ ಸಾಲಿಯನ್ ಮೃತಪಟ್ಟಿದ್ದರು. ಆರಂಭದಲ್ಲಿ ಮುಂಬೈ ಪೊಲೀಸರು ಇದನ್ನು ಆಕಸ್ಮಿಕ ಸಾವು ಮತ್ತು ಆತ್ಮಹತ್ಯೆ ಎಂದು ವರದಿ ನೀಡಿದ್ದರು. ಆದ್ರೆ ಇದನ್ನು ಒಪ್ಪದ ಅವರ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿ ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಹಾಗೇ ವಿಚಾರಣೆ ವೇಳೆ, ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದರೂ ಎಫ್‌ಐಆರ್ ದಾಖಲಿಸದಿರುವುದು ಮತ್ತು ಮರಣೋತ್ತರ ಪರೀಕ್ಷೆಯ ವರದಿಯಲ್ಲಿನ ವ್ಯತ್ಯಾಸಗಳ ಕುರಿತು ಹೈಕೋರ್ಟ್ ಮುಂಬೈ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ತಿಳಿಸಿರುವ ಹೈಕೋರ್ಟ್, ಯಾರನ್ನೂ ತಕ್ಷಣವೇ ಆರೋಪಿ ಎಂದು ಪರಿಗಣಿಸದೆ, ಸೂಕ್ತ ಸಾಕ್ಷ್ಯಾಧಾರ ಹಾಗೂ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ. ಹೈಕೋರ್ಟ್‌ನ ಈ ಆದೇಶವನ್ನು ದಿಶಾ ತಂದೆ ಒಪ್ಪಿಕೊಂಡಿದ್ದಾರೆ.